ಮಡಿಕೇರಿ ಸೆ.27 : ಅಪಘಾತದಿಂದ ಹಾನಿಗೊಳಗಾದ ವೀರಸೇನಾನಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆಯ ದುರಸ್ತಿ ಕಾರ್ಯವನ್ನು ಮಡಿಕೇರಿ ಕೊಡವ ಸಮಾಜದ ಪದಾಧಿಕಾರಿಗಳು ಪರಿಶೀಲಿಸಿದರು.
ಸಮಾಜದ ಅಧ್ಯಕ್ಷ ಮಂಡುವಂಡ ಮುತ್ತಪ್ಪ, ನಿರ್ದೇಶಕರಾದ ಕೇಕಡ ವಿಜುದೇವಯ್ಯ, ನಂದಿನೆರವಂಡ ರವಿಬಸಪ್ಪ, ಮಂಡಿರ ಸದಾ ಮುದ್ದಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ ಹಾಗೂ ಚೊಟ್ಟೆಯಂಡ ಸಂಜು ಕಾವೇರಪ್ಪ ಮೈಸೂರಿಗೆ ತೆರಳಿ ಪ್ರತಿಮೆ ಪರಿಶೀಲಿಸಿದರು.
ಪ್ರತಿಮೆಯ ದುರಸ್ತಿ ಕಾರ್ಯ ಅಂತಿಮ ಹಂತದಲ್ಲಿದ್ದು, ಪ್ರತಿಮೆಯನ್ನು ಪುನರ್ ಪ್ರತಿಷ್ಠಾಪಿಸುವ ಸಂದರ್ಭ ಗೌರವಯುತವಾಗಿ ಮೆರವಣಿಗೆ ನಡೆಸುವ ಕುರಿತು ಮಡಿಕೇರಿ ಕೊಡವ ಸಮಾಜ, ಜಿಲ್ಲಾಡಳಿತ, ನಗರಸಭೆ, ಶಾಸಕರು ಹಾಗೂ ವಿವಿಧ ಸಂಘ ಸಂಸ್ಥೆಗಳೊಂದಿಗೆ ಚರ್ಚಿಸಲಾಗುವುದು ಎಂದು ಮುತ್ತಪ್ಪ ಹೇಳಿದರು.










