ಮಡಿಕೇರಿ ಸೆ.27 : ಹಳೇ ಖಾಸಗಿ ಬಸ್ ನಿಲ್ದಾಣದ ಬಳಿ ನಿರ್ಮಿಸಿದ್ದ ಧ್ವಜಸ್ತಂಭವನ್ನು ನಗರಸಭೆ ತೆರವುಗೊಳಿಸಲು ಮುಂದಾಗಿರುವುದು ಖಂಡನೀಯ ಎಂದು ಕೊಡಗು ಜಿಲ್ಲಾ ಬಸ್ ಕಾರ್ಮಿಕ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಪಿ.ಬಿ.ಭರತ್ ಕುಮಾರ್, ರಾಷ್ಟ್ರೀಯ ಹಬ್ಬದ ಸಂದರ್ಭ ಬಾವುಟ ಹಾರಿಸುವ ಸಲುವಾಗಿ ಹಳೇ ಖಾಸಗಿ ಬಸ್ ನಿಲ್ದಾಣದ ಬಳಿ ಸಂಘದ ವತಿಯಿಂದ ಧ್ವಜಸ್ತಂಭವನ್ನು ನಿರ್ಮಾಣ ಮಾಡಲಾಗಿತ್ತು. ಆದರೆ ಸ್ಥಾಯಿ ಸಮಿತಿ ಸಭೆಯ ನಿರ್ಧಾರದಂತೆ ನಗರಸಭೆ ವತಿಯಿಂದ ಏಕಾಏಕಿ ಧ್ವಜಸ್ತಂಭವನ್ನು ತೆರವುಗೊಳಿಸಲು ಮುಂದಾಗಿರುವುದು ಬಸ್ ಕಾರ್ಮಿಕರಿಗೆ ನೋವು ಉಂಟುಮಾಡಿದೆ ಎಂದರು.
ಧ್ವಜಸ್ತಂಭವನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿರ್ಮಾಣ ಮಾಡಲಾಗಿದ್ದು, ಯಾವುದೋ ಹುನ್ನಾರದಿಂದ ತೆರವುಗೊಳಿಸಲು ನಗರಸಭೆ ಮುಂದಾಗಿದೆ ಎಂದು ಆರೋಪಿಸಿದ ಅವರು, ಮುಂದೇ ಈ ರೀತಿಯ ಘಟನೆ ಮರುಕಳಿಸಿದ್ದಲ್ಲಿ ನಗರಸಭೆಗೆ ಮುತ್ತಿಗೆ ಹಾಕಲಾಗುವುದೆಂದು ಎಚ್ಚರಿಕೆ ನೀಡಿದರು.
ಹಳೇಯ ಖಾಸಗಿ ಬಸ್ ನಿಲ್ದಾಣದ ಸಮೀಪ ಸಾರ್ವಜನಿಕರು ಹಾಗೂ ಬಸ್ ಕಾರ್ಮಿಕರ ಉಪಯೋಗಕ್ಕಾಗಿ ಮುಳಿಯ ಜುವೆಲ್ಸ್ ನಿಂದ ಬಸ್ ನಿಲ್ದಾಣ ಹಾಗೂ ಶೌಚಾಲಯವನ್ನು ನಿರ್ಮಿಸಲಾಗಿದೆ. ಅದರ ಸ್ವಚ್ಛತೆ ಸೇರಿದಂತೆ ಸಂಪೂರ್ಣ ಜವಾಬ್ದಾರಿಯನ್ನು ಕೊಡಗು ಜಿಲ್ಲಾ ಬಸ್ ಕಾರ್ಮಿಕ ಸಂಘ ನಿರ್ವಹಿಸುತ್ತಿದೆ. ಆದರೆ ತಮ್ಮ ಆಸ್ತಿ ಎಂದು ಹೇಳಿಕೊಳ್ಳುವ ನಗರಸಭೆ ಇಲ್ಲಿಯವರೆಗೂ ಅದರ ಸ್ವಚ್ಛತೆಗೆ ಮುಂದಾಗಿಲ್ಲ. ಅಲ್ಲದೇ ನಗರದ ಯಾವುದೇ ರಸ್ತೆಯನ್ನು ದುರಸ್ತಿಪಡಿಸಲು ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಕೆ.ಕೆ.ವಿಜಯ, ಕಾರ್ಯದರ್ಶಿ ಎ.ಎನ್.ಉಮೇಶ್, ಹಿರಿಯ ಸಲಹೆಗಾರ ಎಂ.ಇ.ಸುಲೇಮಾನ್, ಪದಾಧಿಕಾರಿ ಟಿ.ಎಸ್.ಪುರುಷೋತ್ತಮ, ಸದಸ್ಯ ಹೆಚ್.ಎಸ್.ದೇವಯ್ಯ ಉಪಸ್ಥಿತರಿದ್ದರು.
Breaking News
- *ಮಡಿಕೇರಿ ಆಟೋ ಮಾಲೀಕ-ಚಾಲಕರ ಸಂಘದ ಕುಂದು ಕೊರತೆ ಸಭೆ*
- *ಲಾರಿ ಡಿಕ್ಕಿಯಾಗಿ ಬಾಲಕಿ ಸಾವು*
- *ಅದವಿಯಾಗೆ ಅಭಿನಂದನೆ*
- *ನಿಧನ ಸುದ್ದಿ*
- *ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ*
- *ಕಾರಾಗೃಹ ವಾರ್ಡನ್ ಹುದ್ದೆಗೆ ಆಹ್ವಾನ*
- *ವೀರ ಸೇನಾನಿಗಳಿಗೆ ಅಗೌರವ : ಕುಲಾಲ ಕುಂಬಾರ ಸಂಘ ಖಂಡನೆ*
- *ಡಿ.1 ರಂದು ಜಿಲ್ಲಾ ಮಟ್ಟದ ಕ್ರಿಸ್ಮಸ್ ಕರೋಲ್ ಗಾಯನ ಸ್ಪರ್ಧೆ*
- *ಆರೋಪಿಯ ಗಡಿಪಾರಿಗೆ ಹಿಂದು ಜಾಗರಣ ವೇದಿಕೆ ಒತ್ತಾಯ*
- *ಸೋಮವಾರಪೇಟೆ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿವಿಧ ಸ್ಪರ್ಧಾ ಕಾರ್ಯಕ್ರಮ*