ಮಡಿಕೇರಿ ಸೆ.27 : ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೋಧಕ ಆಸ್ಪತ್ರೆ ಮಡಿಕೇರಿ. ಸಮುದಾಯ ಆರೋಗ್ಯ ಕೇಂದ್ರ ಕುಟ್ಟ, ಗ್ರಾಮ ಪಂಚಾಯ್ತಿ ಸಂಯುಕ್ತ ಆಶ್ರಯದಲ್ಲಿ ಕುಟ್ಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಈ ಶಿಬಿರದಲ್ಲಿ ಸಾಮಾನ್ಯ ವೈದ್ಯಶಾಸ್ತ್ರ, ಶಸ್ತ್ರ ಚಿಕಿತ್ಸೆ, ಕಣ್ಣು , ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವ್ಯೆದ್ಯಕೀಯ, ದಂತ, ಮಾನಸಿಕ ರೋಗ, ಅಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವ್ಯೆದ್ಯರು ವೈದ್ಯಕೀಯ ಸೇವೆಯನ್ನು ನೀಡಲಾಯಿತು.
ಈ ಶಿಬಿರದಲ್ಲಿ ಸುಮಾರು 280 ಕ್ಕಿಂತ ಹೆಚ್ಚು ಜನರು ಶಿಬಿರದ ಪ್ರಯೋಜನ ಪಡೆದರು. ಈ ಕಾರ್ಯಕ್ರಮವನ್ನು ಕುಟ್ಟ ಗ್ರಾ.ಪಂ. ಅಧ್ಯಕ್ಷರಾದ ಹೇಮಾ ಅವರು ಉದ್ಘಾಟಿಸಿದರು.
ಕುಟ್ಟ ಗ್ರಾ.ಪಂ.ಉಪಾಧ್ಯಕ್ಷರಾದ ಕೀರ್ತಿ ಮಾತನಾಡಿ ಜಿಲ್ಲೆಯ ಗಡಿಭಾಗದಲ್ಲಿ ಸುಸಜ್ಜಿತವಾದ ಆಸ್ಪತ್ರೆ ಕಟ್ಟಡವಿದ್ದರೂ ತೀವ್ರ ವ್ಯೆದ್ಯರ ಕೊರತೆಯಿದ್ದು ತಜ್ಞ ವ್ಯೆದ್ಯರಿಂದ ಈ ರೀತಿಯ ಹೆಚ್ಚಿನ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಬುಡಕಟ್ಟು ಜನರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ತಿಳಿಸಿದರು.
ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಂಜುಂಡಯ್ಯ ಅವರು ಮಾತನಾಡಿ ಆಯುಷ್ಮಾನ್ ಭವ ಆರೋಗ್ಯ ಕಾರ್ಯಕ್ರಮದ ಕುರಿತು ಸಂಪೂರ್ಣ ಮಾಹಿತಿ ನೀಡಿದರು.
ಸ್ಥಾನೀಯ ವ್ಯೆದ್ಯಾಧಿಕಾರಿ ಡಾ. ವಿ.ಎಸ್.ಸತೀಶ್ ಮಾತನಾಡಿ ಶಿಬಿರದಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆ ಬೇಕಾದಲ್ಲಿ ವ್ಯೆದ್ಯಕೀಯ ಕಾಲೇಜು ಬೋಧಕ ಆಸ್ಪತ್ರೆ ಮಡಿಕೇರಿಗೆ ಬರಲು ನಮ್ಮ ವ್ಯೆದ್ಯರು ತಿಳಿಸಿದಲ್ಲಿ ಮಡಿಕೇರಿಯ ಟೋಲ್ ಗೇಟ್ ಬಳಿ ಇರುವ ವ್ಯೆದ್ಯಕೀಯ ಕಾಲೇಜು ಆಸ್ಪತ್ರೆಗೆ ಬಂದು ಹೆಚ್ಚಿನ ಚಿಕಿತ್ಸೆಯನ್ನು ಪಡೆದುಕೊಳ್ಳಲು ತಿಳಿಸಿದರು. ಹಾಗೆಯೇ ಬರುವ ಸಂದರ್ಭದಲ್ಲಿ ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ ಗಳನ್ನು ತಂದರೆ ಎಲ್ಲಾ ರೀತಿಯ ಪರೀಕ್ಷೆ ಹಾಗೂ ಚಿಕಿತ್ಸೆಗಳು ಉಚಿತವಾಗಿ ದೊರೆಯುವುದು ಎಂದು ತಿಳಿಸಿದರು.
ವ್ಯೆದ್ಯಕೀಯ ಆಸ್ಪತ್ರೆಗೆ ಬರುವ ಸುತ್ತಮುತ್ತಲಿನ ಎಲ್ಲರಿಗೂ ಇದೆ ರೀತಿ ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ತರಲು ತಿಳಿ ಹೇಳಬೇಕೆಂದು ಇದೆ ಸಂದರ್ಭದಲ್ಲಿ ಮನವಿ ಮಾಡಿದರು.
ಕುಟ್ಟ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವ್ಯೆದ್ಯಾಧಿಕಾರಿ ಡಾ.ಸತೀಶ್ ಅವರು ಶಿಬಿರದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಆಯುಷ್ಮಾನ್ ಭವ ಜಿಲ್ಲಾ ನೋಡಲ್ ಅಧಿಕಾರಿ ಡಾ.ರಾಮಚಂದ್ರ ಕಾಮತ್ ಅವರು ಮಾತನಾಡಿ ಕುಟ್ಟ ಗ್ರಾಮದಲ್ಲಿ ಸರಿ ಸುಮಾರು 50 ವಗರ್ ಗಳಲ್ಲಿ ಪ್ರಥಮ ಬಾರಿಗೆ ಬೃಹತ್ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದ್ದು, ವ್ಯೆದ್ಯಕೀಯ ಸೇವೆ ಸಿಗದ ಕುಗ್ರಾಮಗಳಲ್ಲಿ ಹಾಗೂ ಬುಡಕಟ್ಟು ನಿವಾಸಿಗಳು, ವಲಸೆ ಕಾರ್ಮಿಕರು ಇರುವ ಸ್ಥಳಗಳಲ್ಲಿ ಗುಣಮಟ್ಟ ಆರೋಗ್ಯ ಸೇವೆಯನ್ನು ನೀಡುವುದು ಗುರಿ ಎಂದು ತಿಳಿಸಿದರು.
ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಮೇಲ್ವಿಚಾರಕ ಡಿ.ಸಿ ತೇಜಸ್ ಇವರು ವಂದಿಸಿದರು. ಶಿಬಿರದಲ್ಲಿ ಕೊಡಗು ವ್ಯೆದ್ಯಕೀಯ ವಿಜ್ಞಾನಗಳ ಸಂಸ್ಥೆಯ ವತಿಯಿಂದ ಉಚಿತ ಆಯುಷ್ಮಾನ್ ಕಾರ್ಡ್ ಗಳ ನೋಂದಣಿ, ಉಚಿತ ಯುಡಿಐಡಿ ನೋಂದಣಿ, ದೇಹದಾನ, ನೇತ್ರದಾನ, ಅಂಗಾಂಗ ದಾನ ಕುರಿತು ಮಾಹಿತಿ ಹಾಗೂ ಇನ್ನಿತರ ಯೋಜನೆಗಳ ಬಗ್ಗೆ ಆರೋಗ್ಯ ಮಿತ್ರರು ಮಾಹಿತಿಯನ್ನು ನೀಡಿದರು.
Breaking News
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*
- *ಡಿ.1 ರಂದು ಗಾಳಿಬೀಡುವಿನಲ್ಲಿ ಬಾಣೆ ಹಬ್ಬ*
- *ನ.26 ರಂದು ಮಡಿಕೇರಿಯಲ್ಲಿ ಜಿಕೀರ್, ಜಾರಿ ಮತ್ತು ನಾತೆ-ರಸುಲ್” ಗಾಯನ*
- *ವಿಶ್ವಾಸ್ ವೆಂಕಟ್ ಗೆ ಟೇಬಲ್ ಟೆನ್ನಿಸ್ ನಲ್ಲಿ ರನ್ನರ್ ಪ್ರಶಸ್ತಿ*