ಕುಶಾಲನಗರ, ಸೆ.28 : ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ( ಡಿ.ಎಸ್.ಇ.ಆರ್.ಟಿ.) ವತಿಯಿಂದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ” ಎಂಬ ಕೇಂದ್ರ ವಿಷಯದಡಿ ಸೆ.27 ರಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯಲ್ಲಿ ಏರ್ಪಡಿಸಿದ್ದ ಮೈಸೂರು ವಿಭಾಗಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿ ಗಮನ ಸೆಳೆದರು.
ವಿಜ್ಞಾನ ನಾಟಕ ಸ್ಪರ್ಧೆ ಉದ್ಘಾಟಿಸಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ ) ರೂ ಆದ
ಡಯಟ್ ನ ಪ್ರಾಂಶುಪಾಲ ಎಂ.ಚಂದ್ರಕಾಂತ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ಇಂತಹ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ವಿಜ್ಞಾನ ಮನುಷ್ಯನ ಬದುಕಿನ ಅವಿಭಾಜ್ಯ ಅಂಗವಾಗಿದೆ.
ಲೋಕ ಶಿಕ್ಷ ಣದ ಸಂದೇಶವನ್ನು ಸಮಾಜಕ್ಕೆ ರವಾನಿಸುವ ಪ್ರಭಾವಿ ಮಾಧ್ಯಮವಾಗಿ ನಾಟಕಕಲೆ ಮಹತ್ವ ಪಡೆದುಕೊಂಡಿದೆ ಎಂದರು.
ಕಲೆ ಮತ್ತು ವಿಜ್ಞಾನದ ನಡುವೆ ನಿಕಟವಾದ ಸಂಬಂಧವಿದ್ದು, ವಿದ್ಯಾರ್ಥಿಗಳಿಗೆ ಆಯೋಜಿಸಿರುವ ವಿಜ್ಞಾನ ನಾಟಕ ಸ್ಪರ್ಧೆ ವಿದ್ಯಾರ್ಥಿಗಳಿಗೆ ಜ್ಞಾನದ ಪ್ರಭೆಯನ್ನು ಹೆಚ್ಚಿಸುವಲ್ಲಿ ಪರಿಣಾಮಕಾರಿ ಪಾತ್ರ ವಹಿಸುತ್ತದೆ ಎಂದು ಚಂದ್ರಕಾಂತ್ ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ನಾಟಕ ಸ್ಪರ್ಧೆಯ ನೋಡಲ್ ಅಧಿಕಾರಿ ಕೆ.ಜಿ.ನೀಲಕಂಠಪ್ಪ ಮಾತನಾಡಿ, “ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ” ಎಂಬ ಕೇಂದ್ರ ವಿಷಯದಡಿ ಐದು ಉಪ ವಿಷಯಗಳಿಗೆ ನಾಟಕ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.
ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಆಸಕ್ತಿ, ಜ್ಞಾನ ಹೆಚ್ಚಿಸಲು ಸರಕಾರ ವಿಜ್ಞಾನ ನಾಟಕ ಸ್ಪರ್ಧೆ ಏರ್ಪಡಿಸಲಾಗಿದೆ ಎಂದರು.
ಕೂಡುಮಂಗಳೂರು ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲು ಸಹಕಾರಿಯಾಗಿದೆ.
ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗೆ ಹಾಗೂ ಸಮಾಜದಲ್ಲಿ ಬೇರೂರಿರುವ ಮೌಢ್ಯ, ಕಂದಾಚಾರ ನಿವಾರಣೆಗೆ ಇಂತಹ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದರು.
ಡಯಟ್ ಸಂಸ್ಥೆಯ ಪೂರ್ವ ಸೇವಾ ತರಬೇತಿ ವಿಭಾಗದ ಮುಖ್ಯಸ್ಥ ಎಂ.ಕೃಷ್ಣಪ್ಪ, ಸಂಸ್ಥೆಯ
ಉಪನ್ಯಾಸಕರಾದ ವಿ.ವಿಜಯ್, ಕೆ.ಎಸ್.ನಳಿನಾಕ್ಷಿ, ಲತಾ, ಗಾಯಿತ್ರಿ, ಗೀತಾ ಇದ್ದರು. ತೀರ್ಪುಗಾರರರಾಗಿ ಕಡಗದಾಳು ಸರ್ಕಾರಿ ಪ್ರೌಢಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಎಚ್.ಎನ್.ಭಾರತಿ ಹಾಗೂ ಮಡಿಕೇರಿ ಸರ್ಕಾರಿ ಜೂನಿಯರ್ ಕಾಲೇಜಿನ ನಾಟಕ ಶಿಕ್ಷಕ ಪ್ರವೀಣ್ ಪಾಲ್ಗೊಂಡಿದ್ದರು.
ನಾಟಕ ಪ್ರದರ್ಶನ: ನಾಟಕ ಸ್ಪರ್ಧೆಯಲ್ಲಿ “ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ” ಎಂಬ ಕೇಂದ್ರ ವಿಷಯದಡಿ ಅದ್ಭುತ ಆಹಾರವಾಗಿ ಸಿರಿಧಾನ್ಯಗಳು, ಆಹಾರ ಭದ್ರತೆ, ನಿತ್ಯ ಜೀವನದಲ್ಲಿ ಆಧುನಿಕ ತಂತ್ರಜ್ಞಾನ, ಆರೋಗ್ಯ ರಕ್ಷಣೆಯಲ್ಲಿ ಪ್ರಸ್ತುತ ಪ್ರಗತಿಗಳು ಸಮಾಜದಲ್ಲಿನ ಮೂಢನಂಬಿಕೆಗಳು ಎಂಬ ವಿಷಯಗಳ ಕುರಿತು ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿದರು.
ಸ್ಪರ್ಧೆಯಲ್ಲಿ ಕೊಡಗು ಜಿಲ್ಲೆ ಸೇರಿದಂತೆ ರಾಮನಗರ, ಮಂಡ್ಯ, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಿಂದ ತಲಾ ಒಂದೊಂದು ತಂಡದ ಸ್ಪರ್ಧಿಗಳು ಭಾಗವಹಿಸಿದ್ದರು. ಮಕ್ಕಳ ನಾಟಕ ಸ್ಪರ್ಧೆಯು ಗಮನ ಸೆಳೆಯಿತು.
ಮಾನವಕುಲದ ಪ್ರಯೋಜನಕ್ಕಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಎಂಬ ಕೇಂದ್ರ ವಿಷಯದಡಿ ಅದ್ಭುತ ಆಹಾರವಾಗಿ ಸಿರಿಧಾನ್ಯಗಳು, ಆಹಾರ ಭದ್ರತೆ, ನಿತ್ಯ ಜೀವನದಲ್ಲಿ ಆಧುನಿಕ ತಂತ್ರಜ್ಞಾನ, ಆರೋಗ್ಯ ರಕ್ಷಣೆಯಲ್ಲಿ ಪ್ರಸ್ತುತ ಪ್ರಗತಿಗಳು ಹಾಗೂ ಸಮಾಜದಲ್ಲಿನ ಮೂಢನಂಬಿಕೆಗಳು ಎಂಬ ವಿಷಯಗಳ ಕುರಿತು ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿ ಪ್ರೇಕ್ಷಕರ ಗಮನ ಸೆಳೆದರು.