ಮಡಿಕೇರಿ ಸೆ.28 : ಭಾಗಮಂಡಲದ ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯದಲ್ಲಿ ಜರುಗಲಿರುವ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ 2023” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಶ್ರೀ ಭಗಂಡೇಶ್ವರ ದೇವಾಲಯಕ್ಕೆ ಸೇರಿದ ‘ಮುಡಿ ಕಟ್ಟಡ’ದಲ್ಲಿ “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ” ರ ಜಾತ್ರಾ ಮಹೋತ್ಸವದ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು.
ಈ ಸಂದರ್ಭ ಮಾತನಾಡಿದ ಶಾಸಕರು ಭಕ್ತರ ಭಾವನೆಗಳಿಗೆ ಧಕ್ಕೆಯಾಗದಂತೆ, ಪಾರಂಪರಿಕ ಆಚರಣೆಗಳಿಗೆ ಚ್ಯುತಿ ಬಾರದಂತೆ ಕಾವೇರಿ ಜಾತ್ರೆ ನಡೆಯಬೇಕೆಂದು ಸೂಚನೆ ನೀಡಿದರು.
ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ ಹಾಗೂ ಜಿಲ್ಲಾಧಿಕಾರಿ ವೆಂಕಟರಾಜ, ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಾಗರೀಕರು ಹಾಜರಿದ್ದರು.