Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
  • *ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*
  • *ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*
  • *ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮೂರ್ನಾಡು ಹಿಂದೂ ಮಲಯಾಳಿ ಸಂಘದಿಂದ ಸಂಭ್ರಮದ ಓಣಂ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮೂರ್ನಾಡು ಹಿಂದೂ ಮಲಯಾಳಿ ಸಂಘದಿಂದ ಸಂಭ್ರಮದ ಓಣಂ ಆಚರಣೆ*

ಸೆಪ್ಟೆಂಬರ್ 28, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮೂರ್ನಾಡು ಸೆ.28 : ಇಲ್ಲಿನ ಹಿಂದೂ ಮಲಯಾಳಿ ಸಂಘದ ವತಿಯಿಂದ ಆಯೋಜಿಸಲಾದ 15ನೇ ವರ್ಷದ ಓಣಂ ಹಬ್ಬಾಚರಣೆಯು ಅತ್ಯಂತ ವಿಜೃಂಭಣೆಯಿಂದ ಜರುಗಿತು.

ಮೂರ್ನಾಡು ಗೌಡ ಸಮಾಜದಲ್ಲಿ ಆಯೋಜಿಸಲಾದ ಓಣಂ ಹಬ್ಬಾಚರಣೆಯ ಸಮಾರಂಭವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ತಮ್ಮ ತಮ್ಮ ಮನೆಯಲ್ಲಿಯೆ ಓಣಂ ಹಬ್ಬವನ್ನು ಆಚರಿಸಿಕೊಂಡರೂ, ಸಮಾಜ ಬಾಂಧವರೆಲ್ಲರೂ ಕೂಡಿ ಸಂಘದ ಮುಖಾಂತರ ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುವುದು ಸಮಾಜದ ಒಗ್ಗಟ್ಟನ್ನು ಎತ್ತಿಹಿಡಿಯುತ್ತದೆಯಲ್ಲದೆ, ತಮ್ಮ ಸಮಾಜದ ಆಚಾರ-ವಿಚಾರ, ಸಂಸ್ಕೃತಿಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿರುತ್ತದೆ ಎಂದು ಹೇಳಿದರು.

ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ ಹಿಂದೂಗಳಾದ ನಾವು ತಮ್ಮ ಸಂಸ್ಕೃತಿಗಳನ್ನು ಚಾಚೂ ತಪ್ಪದೆ ಪಾಲಿಸಿದಾಗ ಮಾತ್ರ ಹಿಂದೂ ಸಮಾಜ ಗಟ್ಟಿಗೊಳ್ಳುತ್ತದೆ. ಹೀಗೆ ತಮ್ಮ ಆಚಾರ-ವಿಚಾರ ಪಾಲನೆಗಳಿಂದ ಸಮಾಜ ಒಳಿತು ಕಂಡುಕೊಂಡಾಗ ದೇಶವು ಸಹ ಅಭಿವೃದ್ಧಿ ಹೊಂದುತ್ತದೆ. ಸಮಾಜಿಕ ಉತ್ಸವಗಳಿಂದ ಮಾತ್ರ ಒಗ್ಗಾಟ್ಟಾಗಿ ಸೇರಲು ಸಾಧ್ಯವಾಗುತ್ತದೆ. ಸಮಾಜದ ಮುಖ್ಯವಾಹಿನಿಗೆ ಬರಲು ಶಿಕ್ಷಣಕ್ಕೆ ಹೆಚ್ಚು ಒತ್ತಾಸೆ ನೀಡಲೇಬೇಕು. ಕೇಂದ್ರ ಸರ್ಕಾರದಿಂದ ಹತ್ತು ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ. ಅವುಗಳನ್ನು ಸದುಪಯೋಗ ಪಡಿಸಿಕೊಂಡು ಮುಂದೆ ಬರಲು ಪ್ರಯತ್ನಿಸಬೇಕು ಎಂದ ಅವರು ನಮ್ಮ ಶಿಸ್ತುಬದ್ದ ಜೀವನ ಬೇರೆಯವರು ಅನುಕರಣೆ ಮಾಡುವಂತಿರಬೇಕು ಎಂದು ತಿಳಿಸಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಅಧ್ಯಕ್ಷ ವಿ.ಎಂ. ವಿಜಯನ್, ಜಿಲ್ಲಾ ಸಮಿತಿಯ ಮುಖ್ಯ ಕಾರ್ಯದರ್ಶಿ ಪಿ.ಕೆ. ಶಶಿಕುಮಾರ್, ಕಾಂತೂರು ಮೂರ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎಸ್. ಕುಶನ್ ರೈ, ಜಿಲ್ಲಾ ಪಂಚಾಯಿತಿ ಸದಸ್ಯೆ ಸುನೀತ ಹಾಗೂ ಮಡಿಕೇರಿ ತಾಲೂಕು ಎಸ್‌ಎನ್‌ಡಿಪಿಯ ಅಧ್ಯಕ್ಷ ವಾಸುದೇವನ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ವೇದಿಕೆಯಲ್ಲಿ ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಟಿ.ಕೆ. ಸುಧೀರ್ ಮತ್ತು ಹಿಂದೂ ಮಲಯಾಳಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೂರ್ನಾಡು ಹಿಂದೂ ಮಲಯಾಳಿಸಂಘದ ಅಧ್ಯಕ್ಷ ಕೆ. ಬಾಬು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ೧೦ನೇ ತರಗತಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಬಹುಮಾನಗಳನ್ನು ನೀಡಲಾಯಿತು. ರಂಗೋಲಿ(ಪೂಕಳ) ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನಗದು ಬಹುಮಾನ ಮತ್ತು ಟ್ರೋಫಿಗಳನ್ನು ನೀಡಲಾಯಿತು. ಪ್ರತಿ ವರ್ಷ ತಿರುವಾದಿರ ನೃತ್ಯವನ್ನು ತರಬೇತಿ ನೀಡುವ ಸುಜಾತ ಗೋಪಿ ಮತ್ತು ಹಿಂದೂ ಮಲಯಾಳಿ ಸಂಘದ ಅಧ್ಯಕ್ಷ ಕೆ. ಬಾಬು ಅವರನ್ನು ಶಾಲು ಹೊದಿಸಿ, ಫಲ-ತಾಂಬೂಲ ನೀಡಿ ಸಂಘದವತಿಯಿಂದ ಸನ್ಮಾನಿಸಲಾಯಿತು.   ಸಮಾರಂಭಕ್ಕೂ ಮೊದಲು ಮೂರ್ನಾಡಿನ ಮುಖ್ಯ ಬೀದಿಯಲ್ಲಿ ನಡೆದ ಮೆರವಣಿಗೆಯಲ್ಲಿ ಕೇರಳದ ಸಾಂಪ್ರದಾಯಿಕ ಉಡುಪಿನಲ್ಲಿ ಮಹಿಳೆಯರು, ಮಕ್ಕಳು ಮತ್ತು ಮಹನೀಯರು, ಚೆಂಡೆ ಮೇಳದವರು, ಮಾವೇಲಿ ಪಾತ್ರಧಾರಿಗಳು ಪಾಲ್ಗೊಂಡು ನೋಡುಗರ ಗಮನ ಸೆಳೆದರು.

ಹಿಂದೂ ಮಲಯಾಳಿ ಸಂಘದ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಟಿ.ಕೆ. ಸುಧೀರ್ ಸ್ವಾಗತಿಸಿದರು. ಮೂರ್ನಾಡು ಹಿಂದೂ ಮಲಯಾಳಿ ಸಂಘದ ಕಾರ್ಯದರ್ಶಿ ಟಿ.ಕೆ. ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಓಣಂ ಭಕ್ಷ್ಯ ಭೋಜನದ ನಂತರ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.  (ಚಿತ್ರ ವರದಿ : ಟಿ.ಸಿ. ನಾಗರಾಜ್, ಮೂರ್ನಾಡು)

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.5 NEWS DESK : ಮಾದಾಪುರ ಸಮೀಪದ ಗರ್ವಾಲೆ ಗ್ರಾಮದ ಕೋಟೆಬೆಟ್ಟ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ ಶ್ರದ್ಧಾಭಕ್ತಿಯಿಂದ…

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026

*ಜಿಲ್ಲಾ ಮಟ್ಟದ ಮಾದಕ ದ್ರವ್ಯ ಸಮನ್ವಯ ಸಮಿತಿ ಸಭೆ*

ಮಾರ್ಚ್ 5, 2026

*ಮಡಿಕೇರಿಯಲ್ಲಿ ಮಾಚ್೯ 28 ರಂದು ಶ್ರೀ ರಾಮೋತ್ಸವ – ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಆಹ್ವಾನ*

ಮಾರ್ಚ್ 5, 2026

*ರಾಷ್ಟ್ರೀಯ ಮಹಿಳಾ ಕಲಾಶಿಬಿರಕ್ಕೆ ಚಾಲನೆ : ಚಿತ್ರಕಲಾ ಗ್ಯಾಲರಿ ಆರಂಭಿಸಲು ಪರಶುರಾಮ ಸಂಪತ್ ಕುಮಾರ್ ಕರೆ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.