ಬೆಂಗಳೂರು ಸೆ.28 : ಖ್ಯಾತ ಕೃಷಿ ವಿಜ್ಞಾನಿ, ಹಸಿರು ಕ್ರಾಂತಿಯ ಹರಿಕಾರರಾದ ಎಂ.ಎಸ್ ಸ್ವಾಮಿನಾಥನ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಸುಸ್ಥಿರ ಕೃಷಿ ಉತ್ಪನ್ನಗಳ ಉತ್ಪಾದಕತೆಗೆ ಸ್ವಾಮಿನಾಥನ್ ಅವರು ನೀಡಿದ ಕೊಡುಗೆಗಳ ಫಲವಾಗಿ ಭಾರತವು ಕೃಷಿ ಉತ್ಪಾದಕತೆಯಲ್ಲಿ ಸ್ವಾವಲಂಬನೆ ಸಾಧಿಸಿ, ಜಾಗತಿಕ ಮನ್ನಣೆ ಗಳಿಸಲು ಸಾಧ್ಯವಾಯಿತು.
ವಿಶ್ವಸಂಸ್ಥೆಯಿಂದ “ಆರ್ಥಿಕ ಪರಿಸರ ವಿಜ್ಞಾನದ ಪಿತಾಮಹ” ಎಂದು ಕರೆಯಲ್ಪಟ್ಟ ಹಿರಿಯ ಸಸ್ಯ ತಳಿಶಾಸ್ತ್ರಜ್ಞ ಸ್ವಾಮಿನಾಥನ್ ಅಗಲಿಕೆ ನಾಡಿಗೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬವರ್ಗ ಮತ್ತು ಬಂಧು ಮಿತ್ರರಿಗೆ ನೋವು ಭರಿಸುವ ಶಕ್ತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. (ಮುಖ್ಯಮುಂತ್ರಿ ಸಿದ್ದರಾಮಯ್ಯ)