ಮಡಿಕೇರಿ ಸೆ.28 : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಿಸರ್ಚ್ ಮೆಥಾಡಲಜಿ, ರಿಸರ್ಚ್ ಪಬ್ಲಿಕೇಷನ್ಸ್ ಮತ್ತು ಎಥಿಕ್ಸ್ ಎಂಬ ವಿಷಯದ ಮೇಲೆ 2023 ರ ಅ.3 ರಿಂದ 7 ರ ವರೆಗೆ ಕಾರ್ಯಾಗಾರವು ಅಕಾಡೆಮಿ ಕಚೇರಿಯಲ್ಲಿ (ಪ್ರೊ,.ಯು.ಆರ್.ರಾವ್ ವಿಜ್ಞಾನ ಭವನ, ಮೇ, ಸಂದೀಪ್ ಉನ್ನಿಕೃಷ್ಣನ್ ರಸ್ತೆ, ತೋಟಗಾರಿಕಾ ವಿಜ್ಞಾನಗಳ ಕಾಲೇಜು ಆವರಣ, ಜಿಕೆವಿಕೆ, ವಿದ್ಯಾರಣ್ಯಪುರ ಅಂಚೆ, ಬೆಂಗಳೂರು-560097) ನಡೆಯಲಿದೆ.
ಈ ಕಾರ್ಯಾಗಾರದಲ್ಲಿ ಬೆಂಗಳೂರಿನ ಪ್ರತಿಷ್ಠಿತ ಸಂಶೋಧನಾ ಸಂಸ್ಥೆಗಳ ವಿಜ್ಞಾನಿಗಳು ಉಪನ್ಯಾಸ ನೀಡಲಿದ್ದಾರೆ. ಈ ಕಾರ್ಯಾಗಾರವು ಸ್ನಾತಕೋತ್ತರ ವಿದ್ಯಾರ್ಥಿಗಳು/ ಅಧ್ಯಾಪಕರು ಹಾಗೂ ಯುವ ಸಂಶೋಧಕರಿಗೆ ಉಪಯುಕ್ತವಾಗಲಿದೆ. ಕಾರ್ಯಾಗಾರದಲ್ಲಿ ಪ್ರತಿನಿಧಿಗಳಾಗಿ ರಾಜ್ಯಾದ್ಯಂತ ಸ್ನಾತಕೋತ್ತರ ವಿಜ್ಞಾನ ಪದವಿ ಮತ್ತು ಎಂಜಿನಿಯರಿಂಗ್ ಕಾಲೇಜು ಅಧ್ಯಾಪಕರು ಹಾಗೂ ಯುವ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಬಹುದು.
ಭಾಗವಹಿಸಲಿಚ್ಚಿಸುವವರು ಸೆ.30 ರೊಳಗೆ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಅಕಾಡೆಮಿಯ ವೆಬ್‍ಸೈಟ್ http://www.kstacademy.in ಅಥವಾ ವೈಜ್ಞಾನಿಕಾಧಿಕಾರಿಯಾದ ವಿ.ಕೆ.ಶ್ರೀನಿವಾಸು ದೂ. 9620767819 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎ.ಎಂ.ರಮೇಶ್ ತಿಳಿಸಿದ್ದಾರೆ.









