ಮಡಿಕೇರಿ ಸೆ.29 : ಸ್ವಾಮಿ ವಿವೇಕಾನಂದರ ದಿವ್ಯ ಲೀಲಾ ಕ್ಷೇತ್ರ ಡಿವೈನ್ ಪಾರ್ಕ್‍ನ ಅಂಗ ಸಂಸ್ಥೆಯಾದ ಮಡಿಕೇರಿ ವಿವೇಕ ಜಾಗೃತ ಬಳಗದ ವತಿಯಿಂದ ಆತ್ಮೋನ್ನತಿ ಶಿಬಿರ ಕಾರ್ಯಕ್ರಮ ನಡೆಯಿತು.
ನಗರದ ಭಾರತೀಯ ವಿದ್ಯಾಭವನದಲ್ಲಿ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಡಿವೈನ್ ಪಾರ್ಕ್‍ನ ಅಧಿಕಾರಿ ಪದ್ಮಲತಾ ರಾವ್, ಮಡಿಕೇರಿ ವಿವೇಕ ಜಾಗೃತ ಬಳಗದ ಅಧ್ಯಕ್ಷೆ ಟಿ.ಎ.ಪದ್ಮವೇಣಿ ಹಾಗೂ ಮೂರ್ನಾಡು ವಿವೇಕ ಜಾಗೃತ ಬಳಗದ ಅಧ್ಯಕ್ಷೆ ದಿವ್ಯ ತೇಜ್ ಕುಮಾರ್ ಪಾಲ್ಗೊಂಡು ಮಾತನಾಡಿದರು.
ಬಂಧನ, ಮನನ, ಸ್ಮರಣ, ಗಮನದ ಆಧ್ಯಾತ್ಮಿಕ ಚಿಂತನೆಯನ್ನು ನೀಡಿದರು. ಮಾನವ ಜನ್ಮವನ್ನು ಆತ್ಮಶಕ್ತಿ ಜಾಗೃತಿಗಾಗಿ ತ್ಯಾಗ, ಸೇವೆ, ಸಾಧನೆಗಳೊಂದಿಗೆ, ಪಶುತ್ವದಿಂದ ಮಾನವತ್ವ, ಮಾನವತ್ವದಿಂದ ದೈವತ್ವಕ್ಕೆ ಏರಲು ಆತ್ಮ ಸಾಕ್ಷಾತ್ಕಾರ ಮಾಡಿಕೊಳ್ಳೋಣ ಎಂದು ಸಲಹೆ ನೀಡಿದರು.
ಅಭಿಪ್ರಾಯ ಹಂಚಿಕೊಂಡ ಶಿಬಿರಾರ್ಥಿಗಳಾದ ಸೋಮಯ್ಯ ಮುಕ್ಕಾಟಿ, ಸೀತಮ್ಮ ಹಾಗೂ ವಿಶಾಲಾಕ್ಷಿ ಡಿವೈನ್ ಪಾರ್ಕ್ ನ ಮಹತ್ವ ಹಾಗೂ ತಾವು ಪಡೆದ ಕೃಪೆಯ ಬಗ್ಗೆ ತಿಳಿಸಿದರು.
ಜಾಗೃತ ಬಳಗದ ಖಜಾಂಚಿ ಲೀಲಾ ಶೆಡ್ತಿ ಸ್ವಾಗತಿಸಿ, ಯಶಿಕಾ ವಂದಿಸಿದರು. ಸುಮಾರು 100ಕ್ಕೂ ಹೆಚ್ಚು ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಶಿಬಿರಾರ್ಥಿಗಳಿಗೆ ಅನ್ನಸಂತರ್ಪಣೆಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
Breaking News
- *ಕೊಡವ ನ್ಯಾಷನಲ್ ಡೇ ಹಿನ್ನೆಲೆ : ದೇವಟ್ ಪರಂಬುವಿನಲ್ಲಿ ಸಿಎನ್ಸಿ ಪ್ರಾರ್ಥನೆ*
- *ವೀರ ಸೇನಾನಿಗಳಿಗೆ ಅಗೌರವ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘ ಖಂಡನೆ*
- *ಕೊಡವ ಮಕ್ಕಡ ಕೂಟದಿಂದ ದಾಖಲೆಯ 100ನೇ ಪುಸ್ತಕ “100ನೇ ಮೊಟ್ಟ್” ಬಿಡುಗಡೆ : ಭಾಷೆ, ಜಾತಿಯನ್ನು ಮೀರಿದ ಜ್ಞಾನ ಭಂಡಾರವೇ ಸಾಹಿತ್ಯ : ಬಾಚರಣಿಯಂಡ ಅಪ್ಪಣ್ಣ*
- *ಸೋಮವಾರಪೇಟೆ : ಹಾಡಹಗಲೇ ಮಹಿಳೆಯ ಸರ, ಹಣ ಕದ್ದ ಚೋರರಿಗೆ ಗೂಸ*
- *ವೀರ ಸೇನಾನಿಗಳಿಗೆ ಅವಮಾನ : ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್ ಖಂಡನೆ*
- *ಕಿಡಿಗೇಡಿಯ ಗಡಿಪಾರಿಗೆ ಮತ್ತು ಉನ್ನತ ಮಟ್ಟದ ತನಿಖೆಗೆ ಕೊಡವ ನ್ಯಾಷನಲ್ ಕೌನ್ಸಿಲ್ ಒತ್ತಾಯ*
- *ವಾರ ಭವಿಷ್ಯ: ನ.25 ರಿಂದ ಡಿ.1ರ ವರೆಗೆ ಯಾರ ಭವಿಷ್ಯ ಹೇಗಿದೆ…*
- *ವೀರ ಸೇನಾನಿಗಳನ್ನು ಅವಮಾನಿಸಿದವರನ್ನು ಗಡಿಪಾರು ಮಾಡದಿದ್ದರೆ ಕೊಡಗು ಬಂದ್ : ಜಬ್ಬೂಮಿ ಸಂಘಟನೆ ಎಚ್ಚರಿಕೆ*
- *ಹೊದ್ದೂರಿನ ಕಬಡಕೇರಿ ಗ್ರಾಮದಲ್ಲಿ ಸ್ವಚ್ಛತಾ ಶ್ರಮದಾನ*
- *ಕೊಡಗು ಕೃಷಿ ವಿಜ್ಞಾನ ವೇದಿಕೆಯ ಬೆಳ್ಳಿ ಮಹೋತ್ಸವ : ನ.26 ರಂದು ರೈತ ಮೇಳ*