ಮಡಿಕೇರಿ ಸೆ.29 : ಮಡಿಕೇರಿ ಕೊಡವ ಸಮಾಜದ ಅಭಿವೃದ್ಧಿ ಕಾರ್ಯ ನಡೆಯುತ್ತಿರುವ ಹಿನ್ನೆಲೆ ಸಮಾಜದ ನಿಯೋಗ ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪಸಿಂಹ ಅವರನ್ನು ಭೇಟಿಯಾಗಿ ಸಹಕಾರ ಕೋರಿತು.
ಸಂಸದರ ಮೈಸೂರಿನ ಕಚೇರಿಯಲ್ಲಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ ಅವರ ನೇತೃತ್ವದಲ್ಲಿ ನಿರ್ದೇಶಕರಾದ ಕೇಕಡ ವಿಜು ದೇವಯ್ಯ, ನಂದಿನೆರವಂಡ ರವಿ ಬಸಪ್ಪ, ಮಂಡಿರ ಸದಾಮುದ್ದಪ್ಪ, ಕಾಳಚಂಡ ಅಪ್ಪಣ್ಣ, ಮೂವೆರ ಜಯರಾಂ, ಶಾಂತೆಯಂಡ ವಿಶಾಲ್ ಕಾರ್ಯಪ್ಪ ಹಾಗೂ ಚೊಟ್ಟೆಯಂಡ ಸಂಜು ಕಾವೇರಪ್ಪ ಅವರುಗಳು ಭೇಟಿಯಾಗಿ ಚರ್ಚಿಸಿದರು.
ಕೊಡವ ಸಮಾಜ ಕಟ್ಟಡದ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ಅನುದಾನ ಬಿಡುಗಡೆಗೊಳಿಸಿ ಕೊಡುವಂತೆ ಮನವಿ ಮಾಡಿದರು.









