ಮಡಿಕೇರಿ ಸೆ.29 : ಕೊಡಗು ಟೇಬಲ್ ಟೆನ್ನಿಸ್ ಅಸೋಸಿಯೇಷನ್ ವತಿಯಿಂದ “ಆದಮ್ ಕಪ್” ಜಿಲ್ಲಾ ಮಟ್ಟದ ಮುಕ್ತ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ಚಾಲನೆ ದೊರೆಯಿತು.
ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು, ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ ಎಂದರು.
ಟೇಬಲ್ ಟೆನ್ನಿಸ್ ಅಸೋಸಿಯೇಷನ್‍ನ ಗೌರವಾಧ್ಯಕ್ಷ ಮೊಹಮ್ಮದ್ ಆಸೀಫ್ ಪ್ರಾಸ್ತವಿಕವಾಗಿ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯೊಂದಿಗೆ ಕ್ರೀಡೆಯ ಬಗ್ಗೆಯೂ ಹೆಚ್ಚು ಆಸಕ್ತಿ ತೋರಬೇಕು ಎಂದರು.
ಕ್ರೀಡೆ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಸ್ಮಯಿ ಚಕ್ರವರ್ತಿ, ಜನನಿ ಹೆಲ್ತ್ ಕೇರ್ ಸೆಂಟರ್‍ನ ಡಾ.ಎನ್.ಎಸ್.ನವೀನ್ ಹಾಗೂ ಡಾ.ಬಿ.ಕೆ.ರಾಜೇಶ್ವರಿ ಕ್ರೀಡೆಯ ಮಹತ್ವದ ಕುರಿತು ಮಾತನಾಡಿದರು.
ಪ್ರಮುಖರಾದ ಸುಧಾ ಶಂಕರಪ್ರಸಾದ್ ಪ್ರಾರ್ಥಿಸಿ, ಆರ್ಥಿಕ ಸಲಹೆಗಾರರಾದ ಗೀತಾ ಗಿರೀಶ್ ನಿರೂಪಿಸಿ, ವಂದಿಸಿದರು.










