ಮಡಿಕೇರಿ ಸೆ.29 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ವತಿಯಿಂದ ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆಗಳ ಹಾಗೂ ಸರ್ವೋದಯ ಸಮಿತಿ ಇವರ ಸಹಕಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜನ್ಮ ವರ್ಷಾಚರಣೆ ಹಾಗೂ ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವು ಅ.2 ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಪ್ರತಾಪ್ ಸಿಂಹ, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ನಗರಸಭೆ ಅಧ್ಯಕ್ಷರಾದ ಎನ್.ಪಿ.ಅನಿತಾ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ಸರ್ವೋದಯ ಸಮಿತಿ ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ ಇತರರು ಪಾಲ್ಗೊಳ್ಳಲಿದ್ದಾರೆ.
ಸಭಾ ಕಾರ್ಯಕ್ರಮಕ್ಕೂ ಸರ್ವೋದಯ ಸಮಿತಿ ಹಾಗೂ ನಗರಸಭೆ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ನಗರದ ಗಾಂಧಿ ಮಂಟಪದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಗೌರವ ನಮನ ಸಲ್ಲಿಸುವ ಕಾರ್ಯಕ್ರಮವು ಅ.2 ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ.









