ಬೆಂಗಳೂರು ಸೆ.30 : ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ಸುದ್ದಿ ಸಂಸ್ಥೆಯ ನಿರ್ದೇಶಕರ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ.ಎನ್ ಶಾಂತಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಜಾವಾಣಿ ಸಂಸ್ಥೆಯ ನಿರ್ದೇಶಕರು ಮತ್ತು ಸಂಪಾದಕರೂ ಆಗಿರುವ ಶಾಂತಕುಮಾರ್ ಅವರು ತಮ್ಮ ಸುದೀರ್ಘ ಅನುಭವ ಮತ್ತು ಕಾರ್ಯದಕ್ಷತೆಯಿಂದ ಹೊಸ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸುತ್ತಾರೆ ಎಂಬ ಭರವಸೆ ಇದೆ ಎಂದು ಶುಭ ಹಾರೈಸಿದ್ದಾರೆ.










