ನಾಪೋಕ್ಲು ಸೆ.30 : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ತಾಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ವಿವಿಧ ಪ್ರಶಸ್ತಿಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ಜಿಲ್ಲಾ ಮಟ್ಟದ ಬಾಲಕರ ವಾಲಿಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಗಳಿಸಿ ಹುಣಸೂರಿನಲ್ಲಿ ನಡೆದ ವಿಭಾಗ ಮಟ್ಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡಿದ್ದಾರೆ.
ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಬಾಲಕಿಯರು ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಚದುರಂಗ ಸ್ಪರ್ಧೆಯಲ್ಲಿ ವಿಜೇತರಾದ ಮೊಹಮ್ಮದ್ ಅಜ್ಮಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಪ್ರೌಢಶಾಲಾ ವಿಭಾಗದಲ್ಲಿ ಬಾಲಕಿಯರ ಟೇಬಲ್ ಟೆನ್ನಿಸ್ ಪಂದ್ಯದಲ್ಲಿ ಪ್ರಥಮ ಸ್ಥಾನ, ಬಾಲಕರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ತಾಲೂಕು ಹಂತದಲ್ಲಿ ವಿಜೇತರಾದ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಶಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಬಾಲಕರು ತಾಲೂಕು ಮಟ್ಟದಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕಿಯರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕಿ ಕೆ.ಕೆ.ಸರಿತ ತರಬೇತಿ ನೀಡಿದ್ದು, ಶಿಕ್ಷಕ ಎಂ.ಡಿ. ಕಾಳಯ್ಯ ಮಾರ್ಗದರ್ಶನ ನೀಡಿದ್ದಾರೆ.
ಶಾಲೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಡಾ.ಬೊಪ್ಪಂಡ ಜಾಲಿ ಬೋಪಯ್ಯ, ಉಪ ಅಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ಮುಖ್ಯ ಶಿಕ್ಷಕಿ ಬಿ.ಎಮ್. ಶಾರದ , ಶಿಕ್ಷಕ ಎಂ.ಟಿ ಕಾಳಯ್ಯ ,ದೈಹಿಕ ಶಿಕ್ಷಕಿ ಕೆ.ಕೆ.ಸರಿತ ಹಾಜರಿದ್ದರು.
ವರದಿ : ದುಗ್ಗಳ ಸದಾನಂದ