ಮಡಿಕೇರಿ ಅ.2 : ಗಾಂಧಿ ಜಯಂತಿಯ ಹಿನ್ನೆಲೆ ಮಡಿಕೇರಿ ನಗರದ ಸಾಯಿ ಕ್ರೀಡಾ ಶಾಲೆಯ ವಿದ್ಯಾರ್ಥಿಗಳು ಖಾಸಗಿ ಬಸ್ ನಿಲ್ದಾಣದಲ್ಲಿ ಸ್ವಚ್ಛತಾ ಶ್ರಮದಾನ ನಡೆಸಿದರು.
ಮಹಾತ್ಮಗಾಂಧಿ ಅವರ ಆಶಯದಂತೆ ಸ್ವಚ್ಛ ಭಾರತ ಪರಿಕಲ್ಪನೆಯಡಿ ಸ್ವಚ್ಛ ಪರಿಸರಕ್ಕೆ ಆದ್ಯತೆ ನೀಡಿ ಶ್ರಮದಾನ ನಡೆಸುತ್ತಿರುವುದಾಗಿ ವಿದ್ಯಾರ್ಥಿಗಳು ಹೇಳಿದರು.
ನಗರಸಭಾ ಅಧ್ಯಕ್ಷೆ ಅನಿತಾ ಪೂವಯ್ಯ, ಪ್ರಮುಖರಾದ ಶ್ವೇತಾ, ಸಾಯಿ ಹಾಸ್ಟೆಲ್ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.











