ಮಡಿಕೇರಿ ಅ.2 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ನಗರಸಭೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಪದವಿ ಪೂರ್ವ ಶಿಕ್ಷಣ, ಕಾಲೇಜು ಶಿಕ್ಷಣ ಇಲಾಖೆಗಳ ಹಾಗೂ ಸರ್ವೋದಯ ಸಮಿತಿ ಸಹಕಾರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜನ್ಮ ವರ್ಷಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಗಾಂಧಿ ಮಂಟಪದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ನೆರವೇರಿಸಿ ಗೌರವ ನಮನ ಸಲ್ಲಿಸಿದರು.
ಸರ್ವೋದಯ ಸಮಿತಿ ಅಧ್ಯಕ್ಷ ಅಂಬೆಕಲ್ ಕುಶಾಲಪ್ಪ, ಹಿರಿಯ ಸದಸ್ಯ ಟಿ.ಪಿ.ರಮೇಶ್, ಪ್ರಧಾನ ಕಾರ್ಯದರ್ಶಿ ಮುನಿರ್ ಅಹಮ್ಮದ್, ಕಾರ್ಯದರ್ಶಿ ಕೆ.ಟಿ.ಬೇಬಿಮ್ಯಾಥ್ಯು, ಸಮಿತಿ ಸದಸ್ಯರು ಹಾಗೂ ಮತ್ತಿತರರು ಹಾಜರಿದ್ದರು.