ಮಡಿಕೇರಿ ಅ.2 : ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿ ಮತ್ತು ಭಾರತದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವ ಚಿತ್ರಕ್ಕೆ ಕಾಂಗ್ರೆಸ್ ಮುಖಂಡರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿ.ಪಂ ಮಾಜಿ ಸದಸ್ಯ ವಿ.ಪಿ ಶಶಿಧರ್ ಮಾತನಾಡಿ, ಗಾಂಧೀಜಿಯವರ ಹಿನ್ನೆಲೆ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಪಾತ್ರ ಮತ್ತು ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ಮತ್ತು ಸ್ವಾತಂತ್ರ್ಯ ಪಡೆದ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು.
ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಆಡಳಿತ ವಿಚಾರಗಳನ್ನು ನೆನಪಿಸಿದರು.
ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್ ಅವರು ಇಬ್ಬರು ಗಣ್ಯರ ಕುರಿತು ಮಾತನಾಡಿ ಅವರ ವಿಚಾರಧಾರೆಯನ್ನು ಸಂಕ್ಷಿಪ್ತವಾಗಿ ತಿಳಿಸಿದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳು, ಕೊಡಗು ಜಿ.ಪಂ ಮಾಜಿ ಅಧ್ಯಕ್ಷರಾದ ಕೆ.ಪಿ ಚಂದ್ರಕಲ, ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಬ್ಲಾಕ್ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಿರಣ್ ಕುಮಾರ್, ಪುರಸಭಾ ಸದಸ್ಯರುಗಳು, ಗ್ರಾಮ ಪಂಚಾಯಿತಿ ಹಾಲಿ ಮತ್ತು ಮಾಜಿ ಸದಸ್ಯರುಗಳು, ಬ್ಲಾಕ್ ಕಾಂಗ್ರೆಸ್ ನ ಪದಾಧಿಕಾರಿಗಳು, ನಗರ ಕಾಂಗ್ರೆಸ್ ನ ಪದಾಧಿಕಾರಿಗಳು, ಯುವ ಕಾಂಗ್ರೆಸ್ ನ ಪದಾಧಿಕಾರಿಗಳು, ಕಿಸ್ಸನ್ ಘಟಕದ ಪ್ರಮುಖರು, ಪಕ್ಷದ ಹಿರಿಯರು, ಮುಖಂಡರು, ಕಾರ್ಯಕರ್ತರು ಮತ್ತು ಹಿತೈಷಿಗಳು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಸಿಹಿ ಹಂಚಲಾಯಿತು. ನಂತರ ನೆರೆದಿದ್ದ ಎಲ್ಲರೂ ಸ್ವಾತಂತ್ರ್ಯ ಹೋರಾಟದ ಸಂಧರ್ಭದ ಭಜನಾ ಗೀತೆಯಾದ “ರಘುಪತಿ ರಾಘವ ರಾಜ ರಾಮ್” ಗೀತೆಯನ್ನು ಹಾಡಿದರು.








