ಮಡಿಕೇರಿ ಅ.2 : ಜಿಲ್ಲಾಡಳಿತ, ನಗರಸಭೆ ಹಾಗೂ ಸರ್ವೋದಯ ಸಮಿತಿ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತ ನಗರದ ಗಾಂಧಿ ಮಂಟಪದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಶಾಸಕರಾದ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಸತೀಶ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ಲು ಕುಶಾಲಪ್ಪ, ನಿಕಟಪೂರ್ವ ಅಧ್ಯಕ್ಷರಾದ ಟಿ.ಪಿ.ರಮೇಶ್, ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ.ಮ್ಯಾಥ್ಯು, ಸರ್ವೋದಯ ಸಮಿತಿ ಪ್ರಧಾನ ಕಾರ್ಯದರ್ಶಿ ಮುನೀರ್ ಅಹಮ್ಮದ್, ಕಾರ್ಯದರ್ಶಿ ಟಿ.ಎಂ.ಮುದ್ದಯ್ಯ, ಅಂಬೆಕಲ್ಲು ನವೀನ್, ಚುಮ್ಮಿ ದೇವಯ್ಯ, ಚಂದ್ರಶೇಖರ್, ಪ್ರಕಾಶ್ ಆಚಾರ್ಯ, ಕಾನೆಹಿತ್ಲು ಮೊಣ್ಣಪ್ಪ, ಲಿಯಾಕತ್ ಆಲಿ, ಸ್ಕೌಟ್ಸ್ ಮತ್ತು ಗೈಡ್ಸ್‍ನ ದಮಯಂತಿ, ಜುಲೇಕಾಬಿ, ಸೂರಯ್ಯ ಅಬ್ರಾರ್, ಎಂ.ಎನ್.ಸುಬ್ರಮಣಿ, ಪೆಮ್ಮಯ್ಯ, ಕಡ್ಲೇರ ತುಳಸಿ ಮೋಹನ್, ಪ್ರೇಮ ರಾಘವಯ್ಯ, ಭಾರತೀ ರಮೇಶ್, ರೇವತಿ ರಮೇಶ್, ತೆನ್ನಿರಾ ಮೈನಾ, ಸದಸ್ಯರು ಇತರರು ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿದರು.
ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಗಾಂಧಿ ಮಂಟಪದಲ್ಲಿ ಮಹಾತ್ಮ ಗಾಂಧೀಜಿ ಅವರ ಸ್ಮಾರಕ ಉದ್ಯಾನವನ ನಿರ್ಮಾಣಕ್ಕೆ ಶೀಘ್ರ ಚಾಲನೆ ನೀಡಲಾಗುವುದು ಎಂದರು.








