ನಾಪೋಕ್ಲು ಅ.2 : ಮರಂದೋಡ ಗ್ರಾಮದಲ್ಲಿ ಕಾಡಾನೆ ಹಾವಳಿಯಿಂದ ಕೃಷಿ ಪಸಲು ನಷ್ಟವಾಗುತ್ತಿರುವ ಹಿನ್ನೆಲೆ ರೈತರು ಕಂಗಾಲಾಗಿದ್ದಾರೆ.
ಗ್ರಾಮದ ನಿವಾಸಿ ಚೋಯಮಾಡಂಡ ಬಾಸಾ ಪೂಣಚ್ಚ ಅವರ ಗದ್ದೆಗೆ ದಾಳಿ ಮಾಡಿರುವ ಕಾಡಾನೆಗಳು ಭತ್ತದ ಪೈರುಗಳನ್ನು ತುಳಿದು ನಷ್ಟಪಡಿಸಿವೆ. ಅಲ್ಲದೆ ಅಡಿಕೆ ಗಿಡಗಳನ್ನು ಕೂಡ ಧ್ವಂಸಗೊಳಿಸಿದೆ.
ಸ್ಥಳಕ್ಕೆ ಸ್ಥಳೀಯ ಗ್ರಾಮ ಪಂಚಾಯತಿ ಸದಸ್ಯ ಹರೀಶ್ ಮೊಣ್ಣಪ್ಪ, ಅರಣ್ಯಾಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಅರಣ್ಯ ಇಲಾಖೆ ಆನೆಗಳನ್ನು ಕಾಡಿಗೆಗಟ್ಟುವಂತೆ ಆಗ್ರಹಿಸಿದ ಗ್ರಾಮಸ್ಥರು ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಜಿಲ್ಲಾಡಳಿತ ಹಾಗೂ ಸಂಬಂಧಿಸಿ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ವರದಿ : ದುಗ್ಗಳ ಸದಾನಂದ









