ನಾಪೋಕ್ಲು ಅ.2 : ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಪೆರಾಜೆ ಗ್ರಾಮ ಪಂಚಾಯತ್ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛತಾ ಶ್ರಮದಾನ ನಡೆಯಿತು.
ಕೃಷಿ ಪತ್ತಿನ ಸಹಕಾರ ಸಂಘದ ಆವರಣದಿಂದ ಗಡಿಗುಡ್ಡೆ ತನಕ ಮುಖ್ಯ ರಸ್ತೆಯ ಬದಿಗಳ ಕಾಡು ಗಿಡಗಂಟಿಗಳನ್ನು ಕಡಿದು, ತ್ಯಾಜ್ಯಗಳನ್ನು ಸಂಗ್ರಹಿಸಿ ಸ್ವಚ್ಛಗೊಳಿಸಲಾಯಿತು.
ಈ ಸಂದರ್ಭ ಸಹಕಾರ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ಉಪಾಧ್ಯಕ್ಷ ಪಿ.ಎಂ.ಅಶೋಕ್, ಗ್ರಾಮ ಪಂಚಾಯತ್ ಪಿಡಿಒ ಮಹದೇವ ಪ್ರಭು, ಗ್ರಾ.ಪಂ ಉಪಾಧ್ಯಕ್ಷ ನಂಜಪ್ಪ ನಿಡ್ಯಮಲೆ, ಸಹಕಾರ ಸಂಘದ ನಿರ್ದೇಶಕರುಗಳಾದ ಹೊನ್ನಪ್ಪ ಅಮಚೂರು, ಜಯರಾಮ ನಿಡ್ಯಮಲೆ, ಸೀತಾರಾಮ ಕದಿಕಡ್ಕ, ಧನಂಜಯ ಕೋಡಿ, ಪ್ರಮೀಳಾ ಬಂಗಾರಕೋಡಿ, ಪುಷ್ಪಾವತಿ ಯಾಪಾರೆ, ಡಿ.ಸಿ.ಧೀನರಾಜ್, ಎನ್.ವಿ.ಶೇಷಪ್ಪ, ಪಿ.ಟಿ.ಜಯರಾಮ, ಕಿರಣ ಬಂಗಾರಕೋಡಿ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿ ವರ್ಗ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದವರು, ಸ್ವಚ್ಛತಾ ವಾಹನ ಚಾಲಕರು ಪಾಲ್ಗೊಂಡಿದ್ದರು.
ವರದಿ : ದುಗ್ಗಳ ಸದಾನಂದ








