ಮಡಿಕೇರಿ ಅ.2 : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಕೊಡಗು ವಿದ್ಯಾಲಯದ ಎನ್‌ಸಿಸಿ ಕೆಡೆಟ್‌ಗಳು, ಸ್ಕೌಟ್ಸ್ ಮತ್ತು ಗೈಡ್ಸ್, ಇಕೋ ಕ್ಲಬ್,ಶಾಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಜಂಟಿಯಾಗಿ ಸ್ವಚ್ಚತಾ ಶ್ರಮದಾನ ನಡೆಸಿದರು.
ಮಡಿಕೇರಿ ಬಸ್ ಡಿಪೋದಿಂದ ಕೊಡಗು ವಿದ್ಯಾಲಯ ಶಾಲೆಯವರೆಗೆ ಹಾಗೂ ಮಡಿಕೇರಿಯ ಸುದರ್ಶನ ವೃತ್ತದಲ್ಲಿರುವ ಫೀಲ್ಡ್ ಮಾರ್ಷಲ್ ಕೆ ಎಂ ಕಾರ್ಯಪ್ಪ ರವರ ಪ್ರತಿಮೆಯನ್ನು ಸ್ವಚ್ಛಗೊಳಿಸಿದರು.
ಒಟ್ಟು 45 ಎನ್‌ಸಿಸಿ ಕೆಡೆಟ್‌ಗಳು, 20 ಸ್ಕೌಟ್ಸ್ ಮತ್ತು ಗೈಡ್ಸ್, 25 ವಿದ್ಯಾರ್ಥಿಗಳು ಮತ್ತು 24 ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಲಾ ಪ್ರಾಂಶುಪಾಲೆ ಕೆ.ಎಸ್. ಸುಮಿತ್ರಾ ಮತ್ತು ಆಡಳಿತ ವ್ಯವಸ್ಥಾಪಕ ಪಿ.ರವಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.








