ಸುಂಟಿಕೊಪ್ಪ ಅ.2 : ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಜೀವನ ಮೌಲ್ಯ, ಆದರ್ಶಗಳನ್ನು ವಿದ್ಯಾರ್ಥಿಗಳು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ ಹೇಳಿದರು.
ಮಹಾತ್ಮಗಾಂಧೀಜಿ ಹಾಗೂ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಕಾಲೇಜ್ ನಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ವಿದ್ಯಾರ್ಥಿಗಳು ಸರ್ವ ಧರ್ಮ ಸಮನ್ವಯತೆ ಕುರಿತಾದ ಋಘುಪತಿ ರಾಘವರಾಜಾರಾಮ್ ಪ್ರಾರ್ಥನೆ ಮಾಡಿದರು. ವಿದ್ಯಾರ್ಥಿಗಳಿಂದ ವಿವಿಧ ಧಾರ್ಮಿಕ ಗ್ರಂಥಗಳ ಪಠನ ವಾಚನ ನಡೆಯಿತು.
ಕಾಲೇಜಿನ ಇತಿಹಾಸ ಉಪನ್ಯಾಸಕಿ ಕವಿತಾ ಕೆ.ಸಿ. ದಿನದ ಮಹತ್ವ ಕುರಿತು ಮಾತನಾಡಿ ಗಾಂಧೀಜಿ ಅವರ ಜೀವನ ಕ್ರಮ ಎಲ್ಲಾ ಕಾಲಕ್ಕೂ ಪ್ರಸ್ತುವಾದುದು ಎಂದು ಹೇಳಿದರು.
ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು. ಈ ಸಂದರ್ಭ ಉಪನ್ಯಾಸಕರುಗಳಾದ ಅಭಿಷೇಕ್, ಸುನೀತಾ, ಪದ್ಮಾವತಿ, ಸುಚಿತ್ರಾ, ಕವಿತ, ಮಂಜುಳಾ ಕೆ.ಸಿ, ಅನುಷಾ, ಸಂಧ್ಯಾ, ಕನಕ ಇದ್ದರು.











