ಸಿದ್ದಾಪುರ ಅ.3 : ಅಮ್ಮತ್ತಿ ಕಾರ್ಮಾಡು ಶ್ರೀ ಗಜಾನನ ಗೆಳೆಯರ ಬಳಗದ ವತಿಯಿಂದ ಪ್ರಥಮ ವರ್ಷದ ಗೌರಿ ಗಣೇಶ ವಿಸರ್ಜನೋತ್ಸವ ಶ್ರದ್ಧಾಭಕ್ತಿಯಿಂದ ವಿವಿಧ ಕಾರ್ಯಕ್ರಮಗಳೊಂದಿಗೆ ನೆರವೇರಿತು.
ಗೌರಿ ಗಣೇಶ ವಿಸರ್ಜನೆ ಸಂದರ್ಭ ಮುಂಜಾನೆಯಿಂದಲೇ ಗಣಪತಿ ಹೋಮ, ಪೂಜಾ ಕೈಂಕರ್ಯಗಳು ನಡೆಯಿತು. ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನೆರವೇರಿತು.
ವಿಸರ್ಜನೋತ್ಸವ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.
ಸಭಾ ಕಾರ್ಯಕ್ರಮದ ನಂತರ ಅಲಂಕೃತ ಮಂಟಪದಲ್ಲಿ ಗೌರಿ ಗಣೇಶ ಮೂರ್ತಿಯನ್ನು ಕುಳ್ಳಿರಿಸಿ ವಾದ್ಯ ಮೇಳಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಸಿ ಮದ್ರೀರ ಗಣೇಶ್ ಅವರ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.








