ಮಡಿಕೇರಿ ಅ.3 : ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ಅಕ್ಟೋಬರ್, 4 ರಂದು ಬೆಳಗ್ಗೆ 10.30 ರಿಂದ 11.30 ಗಂಟೆವರೆಗೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಹಾಗೆಯೇ ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದು ಕೊರತೆಗಳನ್ನು ನಿವಾರಿಸುವ ಸಭೆಯು ಅಕ್ಟೋಬರ್, 4 ರಂದು ಮಧ್ಯಾಹ್ನ 12.30 ಗಂಟೆಯಿಂದ 01.30 ಗಂಟೆವರೆಗೆ ಸೋಮವಾರಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಹಾಗೆಯೇ ಮಡಿಕೇರಿ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸುವ ಸಭೆಯು ಅಕ್ಟೋಬರ್, 4 ರಂದು ಸಂಜೆ 4 ಗಂಟೆಯಿಂದ 5 ಗಂಟೆವರೆಗೆ ಮಡಿಕೇರಿ ಉಪವಿಭಾಗ ಕಚೇರಿ ಆವರಣದಲ್ಲಿ ಅಧೀಕ್ಷಕ ಎಂಜಿನಿಯರ್, ಸೆಸ್ಕ್, ಕೊಡಗು ಮತ್ತು ಚಾಮರಾಜನಗರ ವೃತ್ತರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಸೋಮವಾರಪೇಟೆ, ಕುಶಾಲನಗರ ಮತ್ತು ಮಡಿಕೇರಿ ವ್ಯಾಪ್ತಿಯ ಸಾರ್ವಜನಿಕರು/ ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲಾಗುತ್ತದೆ. ಸಾರ್ವಜನಿಕರು ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.










