ನಾಪೋಕ್ಲು ಅ.4 : ಕೊಡವ ಸಮಾಜದ ಅಧಿಕಾರ ಹಸ್ತಾಂತರ ಸಮಾರಂಭವು ಸಮಾಜದ ಸಭಾಂಗಣದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಮಾಜದ ಹಾಲಿ ಅಧ್ಯಕ್ಷ ಅಪ್ಪಚೆಟೋಳಂಡ ಮನು ಮುತ್ತಪ್ಪ
ಕೂಡವ ಸಮಾಜ ನಡೆದುಕೊಂಡು ಬಂದಿರುವ ಮಾಹಿತಿ ನೀಡಿದರು.
ನೂತನ ಅಧ್ಯಕ್ಷ ಮುಂಡಂಡ. ಸಿ.ನಾಣಯ್ಯ ಸಮಾಜದ ಲೆಕ್ಕಪತ್ರ ಪುಸ್ತಕವನ್ನು ನೀಡುವುದರೊಂದಿಗೆ ಅಧಿಕಾರ ಹಸ್ತಾಂತರಿಸಿ ನೂತನ ಆಡಳಿತ ಮಂಡಳಿಗೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮುಂಡಂಡ.ಸಿ.ನಾಣಯ್ಯ ಮಾತನಾಡಿ, ಕೊಡವ ಜನಾಂಗದ ಅಭಿವೃದ್ಧಿಗೆ ಹಾಗೂ ಕೊಡವ ಸಮಾಜದ ಅಭಿವೃದ್ಧಿಗೆ ಎಲ್ಲಾ ಆಡಳಿತ ಮಂಡಳಿ ಅವರನ್ನು ಒಟ್ಟುಗೂಡಿಸಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದರು.
ವೇದಿಕೆಯಲ್ಲಿ ನೂತನ ಉಪಾಧ್ಯಕ್ಷ ಕರವಂಡ ಲವ ನಾಣಯ್ಯ, ನೂತನ ಖಜಾಂಚಿ ಚೌರಿರ ಉದಯ, ನೂತನ ಜಂಟಿ ಕಾರ್ಯದರ್ಶಿ ಮಾಚೇಟಿರ ಕುಸು ಕುಶಾಲಪ್ಪ, ಹಾಲಿ ಉಪಾಧ್ಯಕ್ಷ ಮಾಳೆಯಂಡ ಅಯ್ಯಪ್ಪ, ಹಾಲಿ ಖಜಾಂಜಿ ಅಪ್ಪರ0ಡ ಸುಧೀರ್ ಅಯ್ಯಪ್ಪ, ಹಾಲಿ ಹಾಗೂ ನೂತನ ನಿರ್ದೇಶಕರು, ಸದಸ್ಯರು ಹಾಜರಿದ್ದರು.
ವರದಿ : ದುಗ್ಗಳ ಸದಾನಂದ.








