ನಾಪೋಕ್ಲು ಅ.4 : ನಾಪೋಕ್ಲು ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಕೇಟೋಳಿರ ಹರೀಶ್ ಪೂವಯ್ಯ, ಉಪಾಧ್ಯಕ್ಷರಾಗಿ ಕುಂಡ್ಯೂಳಂಡ ಕವಿತಾ ಮುತ್ತಣ್ಣ ಆಯ್ಕೆಯಾಗಿದ್ದಾರೆ.
ನಾಪೋಕ್ಲುವಿನಲ್ಲಿ ಇಂದು ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಬಿಜೆಪಿ ಬೆಂಬಲಿತ 13 ಅಭ್ಯರ್ಥಿಗಳ ಗೆಲುವು ಸಾಧಿಸಿದ್ದಾರೆ.
ಚುನಾವಣಾ ಅಧಿಕಾರಿಯಾಗಿ ಕಕ್ಕಬೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ್ ಕುಮಾರ್ ಕಾರ್ಯನಿರ್ವಹಿಸಿದ್ದಾರೆ.
ವರದಿ : ದುಗ್ಗಳ ಸದಾನಂದ









