ಮಡಿಕೇರಿ ಅ.5 : ಕೊಡಗು ಜಿಲ್ಲಾ ಕಾಂಗ್ರೆಸ್ ಸೇವಾದಳದ ನಾಪೋಕ್ಲು ಬ್ಲಾಕ್ ಅಧ್ಯಕ್ಷರಾಗಿ ಪಿಯುಸ್ ಪೆರೆರ ಆಯ್ಕೆಯಾಗಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರ ಅನುಮೋದನೆ ಮೇರೆಗೆ ಪಿಯುಸ್ ಪೆರೆರ ಅವರನ್ನು ನೇಮಕ ಮಾಡಲಾಗಿದ್ದು, ಕೆಪಿಸಿಸಿಯ ಮಾರ್ಗದರ್ಶನದಲ್ಲಿ ರಾಜ್ಯದ ನಾಯಕರು ಮತ್ತು ಜಿಲ್ಲಾಧ್ಯಕ್ಷರ ಸಹಕಾರದೊಂದಿಗೆ ಕಾಂಗ್ರೆಸ್ ಸೇವಾದಳದ ಸಂಘಟನೆ ಮತ್ತು ಪಕ್ಷದ ಬಲವರ್ಧನೆ ಮಾಡಲು ಕಾರ್ಯೋನ್ಮುಖರಾಗಬೇಕೆಂದು ಸೇವದಳದ ರಾಜ್ಯ ಸಂಘಟಕ ಎಂ.ರಾಮಚಂದ್ರ ತಿಳಿಸಿದ್ದಾರೆ.









