ಮಡಿಕೇರಿ ಅ.5 : ಮೈಸೂರಿನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮಡಿಕೇರಿಯ ಮರ್ಕರ ಟೆಕ್ವಾಂಡೋ ಕ್ಲಬ್ ನ ವಿದ್ಯಾರ್ಥಿಗಳು ಚಿನ್ನ ಮತ್ತು ಬೆಳ್ಳಿ ಗೆದ್ದುಕೊಂಡಿದ್ದಾರೆ.
ನಗರದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜು ವಿದ್ಯಾರ್ಥಿನಿ ಲಿಪಿಕಾ ಎಂ.ಆರ್ ಚಿನ್ನ, ಮಡಿಕೇರಿಯ ಇಮ್ರಾನ್ ಎಂ.ಐ ಚಿನ್ನ ಮತ್ತು ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳಾದ ಪ್ರಜ್ಞಾ ಎನ್.ಕೆ ಬೆಳ್ಳಿ ಹಾಗೂ ಮನಸ್ವಿ ಬಿ. ಬೆಳ್ಳಿ ಗೆದ್ದು ಅ.13 ರಂದು ಬೆಂಗಳೂರಿನಲ್ಲಿ ನಡೆಯುವ ಸಿಎಂ ಕಪ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇವರುಗಳು ಮರ್ಕರ ಟೆಕ್ವಾಂಡೋ ಕ್ಲಬ್ ನ ಮಾಸ್ಟರ್ ಕುಶಾಲ್ ಕುಮಾರ್ ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.











