ಸೋಮವಾರಪೇಟೆ ಅ.5 : ಕೊಡಗು ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸೋಮವಾರಪೇಟೆ ಓಎಲ್‍ವಿ ಪ್ರೌಢಶಾಲೆ ವಿದ್ಯಾರ್ಥಿನಿ ಅಪೂರ್ವ ಕಿರಣ್ ಪ್ರಥಮ ಸ್ಥಾನ ಪಡೆದು, ಶಿವಮೊಗ್ಗದಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಇವರು ಸೋಮವಾರಪೇಟೆ ಕಿರಣ್ ಮತ್ತು ರೇಶ್ಮಾ ದಂಪತಿಗಳ ಪುತ್ರಿಯಾಗಿದ್ದು, ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಸಂಸ್ಥೆಯಲ್ಲಿ ತರಬೇತಿ ಪಡೆದಿದ್ದಾರೆ.









