ಮಡಿಕೇರಿ ಅ.5 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಮುಖ ಬೇಡಿಕೆಗಳ ಕುರಿತು ಕೊಡವ ಜನಜಾಗೃತಿ ಮೂಡಿಸುತ್ತಾ ಸರ್ಕಾರದ ಗಮನ ಸೆಳೆಯಲು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ 5 ಹಂತಗಳ ಪಾದಯಾತ್ರೆಯಲ್ಲಿ 3ನೇ ಹಂತದ ಪಾದಯಾತ್ರೆ ಅ.7 ರಿಂದ ಆರಂಭಗೊಳ್ಳಲಿದೆ ಎಂದು ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಅ.7 ರಂದು ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪಲಿನಲ್ಲಿ ಪಾದಯಾತ್ರೆ, ಕಂಗಳತ್ತನಾಡ್ (ಗೊಣಿಕೊಪ್ಪ-ಮಾಯಮುಡಿ) 3.00 ಗಂಟೆಗೆ ಅರ್ಕೇರಿನಾಡ್ (ಬಾಳೆಲೆ) (ಪೊನ್ನಂಪೇಟೆ ತಾಲೂಕು), ಅ.8 ರಂದು ಬೆಳಗ್ಗೆ 10 ಗಂಟೆಗೆ ಕಿರ್ನಾಲ್‍ನಾಡ್ (ಕಿರ್ಗೂರ್-ಬೆಸಗೂರ್), 3 ಗಂಟೆಗೆ ಪತ್ತ್ ಕಟ್‍ನಾಡ್ (ಬೆಕ್ಕೆಸೆಡ್ಲೂರ್-ಕಾನೂರ್) (ಪೊನ್ನಂಪೇಟೆ ತಾಲೂಕು), ಅ.9 ರಂದು ಬೆಳಗ್ಗೆ 10 ಗಂಟೆಗೆ ತೊಡನಾಡ್ (ಕುಮಟೂರ್-ಶ್ರೀಮಂಗಲ), 2:30 ಗಂಟೆಗೆ, ಕುರ್ಚಿನಾಡ್ (ಕುರ್ಚಿ-ಬೀರುಗ) (ಪೊನ್ನಂಪೇಟೆ ತಾಲೂಕು), ಅ.10 ರಂದು ಬೆಳಗ್ಗೆ 10 ಗಂಟೆಗೆ ಮರೆನಾಡ್, ಪಾಕೇರಿನಾಡ್, ಐವತ್ನಾಡ್, ಪೊನಾಡ್ ಈ ನಾಲ್ಕು ನಾಡು ಮಂದ್‍ಗಳಲ್ಲಿ ಸಭೆ (ಬಾಡಗರ ಕೇರಿ-ತೆರಾಲ್-ಬಿರುನಾಣಿ) (ಪೊನ್ನಂಪೇಟೆ ತಾಲ್ಲೂಕು), ಅ.11 ರಂದು ಬೆಳಗ್ಗೆ 10 ಗಂಟೆಗೆ ತಾಳೆರಿನಾಡ್ (ಟಿ.ಶೆಟ್ಟಿಗೇರಿ), 2.30 ಗಂಟೆಗೆ ಅಂಜಿಗೇರಿನಾಡ್ (ಹುದಿಕೇರಿ-ಬೇಗೂರು) (ಪೊನ್ನಂಪೇಟೆ ತಾಲೂಕು) ನಲ್ಲಿ ನಡೆಯಲಿದೆ ಎಂದು ನಾಚಪ್ಪ ಹೇಳಿದ್ದಾರೆ.









