ವಿರಾಜಪೇಟೆ ಅ.6 : ವಿರಾಜಪೇಟೆಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯಲ್ಲಿ ವಿರಾಜಪೇಟೆಯ ಕಾವೇರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ವಿದ್ಯಾರ್ಥಿಗಳಾದ ಅನನ್ಯ, ಸಿಂಗಲ್ಸ್ ಹಾಗೂ ಡಬಲ್ಸ್ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿನಿ ವಂಶಿ ಡಬಲ್ಸ್‍ನಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ ಎಂದು ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಆನಂದ್ ಕಾರ್ಲ ತಿಳಿಸಿದ್ದಾರೆ.









