ಮಡಿಕೇರಿ ಅ.6 : ಕೊಡಗು ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಅ.10 ರಿಂದ 25 ರವರೆಗೆ ದಸರಾ ರಜೆ ಘೋಷಿಸಲಾಗಿದೆ.
ಈ ಹಿಂದೆ ಅ.9 ರಿಂದ 24 ರವರೆಗೆ ರಜೆ ನೀಡಲಾಗಿತ್ತು. ಆದರೆ ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಮೆರಗು ಅ.24 ರ ರಾತ್ರಿಯೂ ನಡೆಯುವುದರಿಂದ ವಿದ್ಯಾರ್ಥಿಗಳಿಗೆ ಅಡಚಣೆಯಾಗಬಾರದು ಎನ್ನುವ ಕಾರಣಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ಸಲಹೆಯಂತೆ ಶಿಕ್ಷಣ ಇಲಾಖೆ ಈ ಮಾರ್ಪಾಡು ಮಾಡಿ ಆದೇಶಿಸಿದೆ.









