ಮಡಿಕೇರಿ ಅ.6 : ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ 9 ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ನಡೆಸುತ್ತಿರುವ 3ನೇ ಹಂತದ ಪಾದಯಾತ್ರೆ ಅ.7 ರಂದು ಗೋಣಿಕೊಪ್ಪದಿಂದ ಆರಂಭಗೊಳ್ಳಲಿದೆ ಎಂದು ಸಿಎನ್ ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ.
ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪ ಪಟ್ಟಣದ ಶ್ರೀಉಮಾ ಮಹೇಶ್ವರಿ ದೇವಾಲಯದ ಬಳಿಯಿಂದ ಪಾದಯಾತ್ರೆ ಸಾಗಲಿದೆ. ಕಂಗಳತ್ತನಾಡ್ (ಗೊಣಿಕೊಪ್ಪ-ಮಾಯಮುಡಿ), ಮಧ್ಯಾಹ್ನ 3 ಗಂಟೆಗೆ ಪೊನ್ನಂಪೇಟೆ ತಾಲ್ಲೂಕಿನ ಅರ್ಕೇರಿನಾಡ್ (ಬಾಳೆಲೆ), ಅ.8 ರಂದು ಬೆಳಗ್ಗೆ 10 ಗಂಟೆಗೆ ಕಿರ್ನಾಲ್‍ನಾಡ್ (ಕಿರ್ಗೂರ್-ಬೆಸಗೂರ್), 3 ಗಂಟೆಗೆ ಪತ್ತ್ ಕಟ್‍ನಾಡ್ ಬೆಕ್ಕೆಸೆಡ್ಲೂರ್-ಕಾನೂರ್ ನಲ್ಲಿ ಪಾದಯಾತ್ರೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.









