ಮಡಿಕೇರಿ ಅ.7 : ಜಗತ್ತಿನ ಪ್ರಸಿದ್ಧ ಮೈಸೂರು ದಸರಾ ಉತ್ಸವ-2023ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ, ಮೈಸೂರು ಸಂಯುಕ್ತಾಶ್ರಯದಲ್ಲಿ ಅ.15 ರಿಂದ 23 ರವರೆಗೆ “ಮೈಸೂರು ದಸರಾ ಕನ್ನಡ ಪುಸ್ತಕ ಮಾರಾಟ ಮೇಳ-2023”ನ್ನು ಓವಲ್‍ಗ್ರೌಂಡ್ ಹಳೆಯ ಡಿ.ಸಿ.ಆಫೀಸ್ ಪಕ್ಕ, ಮೈಸೂರು ಇಲ್ಲಿ ಏರ್ಪಡಿಸಲಾಗುವುದು.
ಈ ಪುಸ್ತಕ ಮೇಳದಲ್ಲಿ ಕನ್ನಡ ಪ್ರಕಾಶಕರು, ಮಾರಾಟಗಾರರು ಭಾಗವಹಿಸಬಹುದಾಗಿದ್ದು, ಮಳಿಗೆಯೊಂದಕ್ಕೆ ರೂ.1,000 ಗಳ ಭದ್ರತಾ ಠೇವಣಿ ಡಿ.ಡಿ.ಯನ್ನು ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಅವರ ಹೆಸರಿನಲ್ಲಿ ಡಿಡಿಗಳನ್ನು ಸಲ್ಲಿಸುವುದು. ಮೇಳದಲ್ಲಿ ಭಾಗವಹಿಸಲು ಇಚ್ಚಿಸುವ ಪ್ರಕಾಶಕರು/ಮಾರಾಟಗಾರರು ನಿಗದಿತ ಅರ್ಜಿ ನಮೂನೆಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರಿನ ಕಛೇರಿ ಅಥವಾ ಆಯಾ ಜಿಲ್ಲೆಯಲ್ಲಿರುವ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಛೇರಿಗಳಲ್ಲಿ ಅಥವಾ ಪ್ರಾಧಿಕಾರದ ವೆಬ್‍ಸೈಟ್ https://kpp.karnataka.gov.in ನಲ್ಲಿ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಅಕ್ಟೋಬರ್, 12 ರೊಳಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಅವರ ಹೆಸರಿಗೆ ಅಂಚೆಯ ಮೂಲಕ ಹಾಗೂ ಇ-ಮೇಲ್ kannadappradhikara@gmail.com ರ ಮೂಲಕ ಸಲ್ಲಿಸಲು ಕೋರಿದೆ. ನಿರ್ಮಿಸಲಾಗುವ 60 ಮಳಿಗೆಗಳನ್ನು ಆದ್ಯತೆಯ ಮೇರೆಗೆ ಹಂಚಿಕೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು 560002 ದೂ:080-22484516 / 22107704 ನ್ನು ಸಂಪರ್ಕಿಸಬಹುದು ಎಂದು ಆಡಳಿತಾಧಿಕಾರಿ ಕೆ.ಬಿ.ಕಿರಣ್‍ಸಿಂಗ್ ತಿಳಿಸಿದ್ದಾರೆ.
Breaking News
- *ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜ್ ನಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ*
- *ಕೊಡಗು ಹಿತರಕ್ಷಣಾ ವೇದಿಕೆಯಿಂದ ಸಂಭ್ರಮದ 76ನೇ ಗಣರಾಜ್ಯೋತ್ಸವ ಆಚರಣೆ*
- *ರಾಜಾಸೀಟು ಸೊಬಗಿಗೆ ಮನಸೋತ ಉಸ್ತುವಾರಿ ಸಚಿವರು*
- *ಸಿಕ್ಕ ಸಿಕ್ಕ ವಾಹನಗಳ ಮೇಲೆ ಒಂಟಿ ಸಲಗ ದಾಳಿ*
- *ಕೊಡ್ಲಿಪೇಟೆ ನಂದಿಪುರ ಕೆರೆ ಅಭಿವೃದ್ಧಿ : ಗ್ಯಾರಂಟಿ ಯೋಜನೆಗಳ ಮೂಲಕ ಭ್ರಷ್ಟಚಾರವಿಲ್ಲದೆ ಜನರಿಗೆ ನೇರವಾಗಿ ಹಣ : ಸಚಿವ ಎನ್.ಎಸ್.ಭೋಸರಾಜು*
- *ಸಿಎನ್ಸಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಕೊಡಗು ವಿಶ್ವವಿದ್ಯಾಲಯದಲ್ಲಿ ಕೌಶಲ್ಯಾಭಿವೃದ್ಧಿ ಡಿಪ್ಲೊಮೋ ಕೋರ್ಸ್ ಲೋಕಾರ್ಪಣೆ : ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಬೇಕು : ಸಚಿವ ಎನ್ ಎಸ್ ಭೋಸರಾಜು ಕರೆ*
- *ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆ : ಸಮಸ್ಯೆಗಳ ಪರಿಹಾರಕ್ಕೆ ಸಚಿವ ಎನ್.ಎಸ್.ಭೋಸರಾಜು ಸೂಚನೆ*
- *ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದಿಂದ ಗುರುವಂದನಾ ಕಾರ್ಯಕ್ರಮ*
- *ಮಡಿಕೇರಿಯಲ್ಲಿ 76 ನೇ ಗಣರಾಜ್ಯೋತ್ಸವದ ಅರ್ಥಪೂರ್ಣ ಆಚರಣೆ*