ಪುತ್ತೂರು ಅ.7 : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಎಂ.ಸಿ.ಎ ವಿಭಾಗದ ವಿದ್ಯಾರ್ಥಿಗಳ ಫಲಿತಾಂಶವು ಪ್ರಕಟಗೊಂಡಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಂ.ಸಿ.ಎ ವಿಭಾಗದ ವಿದ್ಯಾರ್ಥಿಗಳು ಶೇ.100 ಫಲಿತಾಂಶದೊಂದಿಗೆ ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆದ ಪರೀಕ್ಷೆಗೆ ಕಾಲೇಜಿನಿಂದ ಒಟ್ಟು 51 ವಿದ್ಯಾರ್ಥಿಗಳು ಹಾಜರಾಗಿದ್ದು 48 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 3 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಅರ್ಹ ವಿದ್ಯಾರ್ಥಿಗಳು ಈಗಾಗಲೇ ಕ್ಯಾಂಪಸ್ ನೇಮಕಾತಿಯ ಮೂಲಕ ವಿವಿಧ ಕಂಪೆನಿಗಳಿಗೆ ಆಯ್ಕೆಯಾಗಿದ್ದಾರೆ. 2021 ರಲ್ಲಿ ಪ್ರಾರಂಭವಾದ ಎಂಸಿಎ ವಿಭಾಗದ ಪ್ರಥಮ ತಂಡದ ಈ ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ, ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ನಿರ್ದೇಶಕರು, ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ, ಎಂಸಿಎ ವಿಭಾಗದ ನಿರ್ದೇಶಕಿ ಡಾ.ವಂದನಾ.ಬಿ.ಎಸ್, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಶ್ಲಾಘಿಸಿದ್ದಾರೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*