ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವತಿಯಿಂದ 100 ನೂತನ ಕರ್ನಾಟಕ ಸಾರಿಗೆ, 40 ಹವಾ ನಿಯಂತ್ರಣ ರಹಿತ ಹಾಗೂ 4 ಎಸಿ ಅತ್ಯಾಧುನಿಕ ಸ್ಲೀಪರ್ ಬಸ್ಸುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.
ವಿಧಾನಸೌಧದ ಪೂರ್ವದ್ವಾರ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಬೆಳಗ್ಗೆ 10ಗಂಟೆಗೆ ಸಂಸ್ಥೆ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಬಸ್ ಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು.
ಈ ಸಂದರ್ಭ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಚಿವರಾದ ಮುನಿಯಪ್ಪ, ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ ಹಾಗೂ ಸಾರಿಗೆ ಅಧಿಕಾರಿಗಳು ಹಾಜರಿದ್ದರು.