ಮಡಿಕೇರಿ ಅ.7 : ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಶನ್ ನ ಕೊಡಗು ಶಾಖೆ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನದ ಕುರಿತು ಅ.9 ರಂದು ಮಡಿಕೇರಿಯಲ್ಲಿ ಶಿಕ್ಷಣ ತಜ್ಞರ ವಿಶೇಷ ಸಭೆ ನಡೆಯಲಿದೆ ಎಂದು ಸಂಸ್ಥೆಯ ಕೊಡಗು ಜಿಲ್ಲಾ ಸಂಚಾಲಕ ಜಯಪ್ರಕಾಶ್ ಎಸ್.ತಂಟೆಪಾಡಿ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.30ಗಂಟೆಗೆ ನಗರದ ಕಾವೇರಿ ಹಾಲ್ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಧ್ಯಕ್ಷತೆಯನ್ನು ಪೊನ್ನಂಪೇಟೆ ಸಾಯಿಶಂಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಕೊಡಗು ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘದ ಅಧ್ಯಕ್ಷ ಕೋಳೆರ ಝರು ಗಣಪತಿ ವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ಮಾಜಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಪಿ.ಸುಬ್ರಮಣ್ಯ ಯಡಿಪಡಿತ್ತಾಯ ಅವರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಹಾಲಿ ಹಾಗೂ ಮಾಜಿ ಶಾಸಕರು, ವಿಶ್ರಾಂತ ಕುಲಪತಿಗಳು, ಹಾಲಿ, ಮಾಜಿ ಅಕಾಡೆಮಿಕ್ ಕೌನ್ಸಿಲ್, ಸಿಂಡಿಕೇಟ್ ಸದಸ್ಯರು, ಶಿಕ್ಷಣ ತಜ್ಞರು, ಪ್ರಾಂಶುಪಾಲರು, ಉಪನ್ಯಾಸಕರು, ಮುಖ್ಯೋಪಧ್ಯಾಯರು, ಶಿಕ್ಷಕರು, ವಿದ್ಯಾರ್ಥಿಗಳು, ಆಡಳಿತ ಮಂಡಳಿ, ಬರಹಗಾರರು, ಅಂಕಣಕಾರರು, ಸಾಹಿತಿಗಳು ಹಾಗೂ ಚಿಂತಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಮಂಗಳೂರು ವಿಶ್ವ ವಿದ್ಯಾನಿಲಯದ ನಿಕಟಪೂರ್ವ ಸಿಂಡಿಕೇಟ್ ಸದಸ್ಯ ಹಾಗೂ ಪೀಪಲ್ಸ್ ಫೋರಂ ಫಾರ್ ಕರ್ನಾಟಕ ಎಜುಕೇಶನ್ ನ ಮಂಗಳೂರು ವಿಭಾಗದ ಸಂಚಾಲಕ ಕೆ.ರಮೇಶ್ ಮಾತನಾಡಿ, ದೇಶದಲ್ಲಿ ಮೊದಲ ಬಾರಿಗೆ 2020-21ರಲ್ಲಿ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡಲಾಗಿದೆ. ಆದರೆ ಇಂತಹ ಶಿಕ್ಷಣ ನೀತಿಯನ್ನು ರದ್ದುಗೊಳಿಸಲು ಹೊರಟಿರುವ ಸರ್ಕಾರದ ನಿರ್ಧಾರ ಪೂರ್ವಾಗ್ರಹವಾಗಿದೆ ಎಂದು ಆರೋಪಿಸಿದರು.
ಸಭೆಯಲ್ಲಿ ಶಿಕ್ಷಣ ನೀತಿಯ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಯಲಿದ್ದು, ಎನ್‍ಇಪಿಯನ್ನು ರದ್ದುಪಡಿಸುವ ನಿರ್ಧಾರವನ್ನು ಖಂಡಿಸಿ ಮತ್ತು ಇದರ ಪರಿಣಾಮವನ್ನು ಅವಲೋಕಿಸಲು ಶಿಕ್ಷಣ ತಜ್ಞರ ವಿಶೇಷ ಸಭೆಯನ್ನು ಆಯೋಜಿಸಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮದೆನಾಡು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಧನಂಜಯ ಅಗೋಳಿಕಜೆ ಉಪಸ್ಥಿತರಿದ್ದರು.
Breaking News
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಗೌರವಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಗಣತಂತ್ರ ಹಬ್ಬದ ಮೂಲಕ ನಮ್ಮ ದೇಶದ ಸಾಂವಿಧಾನಿಕ ಅನನ್ಯತೆಯನ್ನು ಸಾರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನದ ಆಶಯಗಳಿಗೆ ಬದ್ಧರಾಗಿರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಭಾರತೀಯರಾಗಿರುವುದಕ್ಕೆ ಹೆಮ್ಮೆ ಪಡೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*