ಮಡಿಕೇರಿ ಅ.8 : ಜಿಲ್ಲಾಡಳಿತ, ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಮಂಡಳಿ ಮತ್ತು ಕೊಡಗು ಜಿಲ್ಲಾ ಕರಾಟೆ ಅಸೋಸಿಯೇಷನ್ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾವಳಿಯು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಪಂದ್ಯಾವಳಿಯಲ್ಲಿ ವಿರಾಜಪೇಟೆ ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಟಿ.ಪಿ.ಭವ್ಯ ಪ್ರಥಮ ಸ್ಥಾನ ಪಡೆದು, ಮೈಸೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿದ್ದಾರೆ.
ಇವರು ಸಿದ್ದಾಪುರ ಸಮಿಪದ ಇಂಜಿಳಗೆರೆ ನಿವಾಸಿ ಟಿ.ಎ.ಪ್ರಕಾಶ್ ಹಾಗೂ ಟಿ.ಪಿ.ದಿವ್ಯ ದಂಪತಿಗಳ ಪುತ್ರಿಯಾಗಿದ್ದಾರೆ. ಭವ್ಯ ಅಮ್ಮತ್ತಿಯ ಝೆನ್ ಶಿಟೋರಿಯೋ ಕರಾಟೆ ಫೆಡರೇಶನ್ ನ ತರಬೇತುದಾರರಾದ ಪ್ರಸನ್ನ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿದ್ದಾರೆ.








