ಮಡಿಕೇರಿ ಅ.18 : ಶಾಲಾ ಬಸ್‍ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಗೋಣಿಕೊಪ್ಪ ಸಮೀಪದ ಅತ್ತೂರು ಗ್ರಾಮದಲ್ಲಿ ನಡೆದಿದೆ.
ಗೋಣಿಕೊಪ್ಪಲಿನ ಖಾಸಗಿ ಶಾಲೆಯ ಸೇರಿದ ಬಸ್ ನಲ್ಲಿ ನಸುಕಿನ ಜಾವ 3 ಗಂಟೆ ಸುಮಾರಿಗೆ ಬೆಂಕಿಕಾಣಿಸಿಕೊಂಡಿದ್ದು, ಬೀಯರ್ ಬಾಟಲಿಗೆ ಪೆಟ್ರೋಲ್ ತುಂಬಿಸಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಬೆಂಕಿ ನಾಲೆಗೆ ಬಸ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಗೋಣಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.








