ಮಡಿಕೇರಿ ಅ.9 : ಕೊಡಗು ಗೌಡ ನಿವೃತ್ತ ನೌಕರರ ಸಂಘದ ನೇತೃತ್ವದಲ್ಲಿ ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ, ಚೆಟ್ಟಳ್ಳಿ ಕಾಫಿ ಸಂಶೋಧನಾ ಉಪಕೇಂದ್ರ, ಮರಗೋಡು ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ, ಮರಗೋಡು ಫಾರ್ಮರ್ಸ್ ಡೆವಲಪ್ ಮೆಂಟ್ ಮತ್ತು ರಿಕ್ರಿಯೇಶನ್ ಕ್ಲಬ್ ನ ಸಂಯುಕ್ತಾಶ್ರಯದಲ್ಲಿ ಕಾಫಿ ಮತ್ತು ಕಾಳು ಮೆಣಸು ಬೆಳೆಗಳ ಬೇಸಾಯದ ಕುರಿತು ಕೃಷಿಕರಿಗಾಗಿ ವಿಚಾರ ಸಂಕಿರಣ ನಡೆಯಿತು.
ಮರಗೋಡುವಿನ ಪ್ರಾಥಮಿಕ ಕೃಷಿ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರದ ವಿಷಯ ತಜ್ಞರಾದ ಡಾ.ಪ್ರಭಾಕರ್ ಹಾಗೂ ಡಾ.ವಿರೇಂದ್ರ ಕುಮಾರ್ ಅವರುಗಳು ಕಾಳು ಮೆಣಸು ಬೇಸಾಯದ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಚೆಟ್ಟಳ್ಳಿ ಕಾಫಿ ಸಂಶೋಧನಾ ಕೇಂದ್ರದ ವಿಷಯ ತಜ್ಞರಾದ ಡಾ.ನಾಗರಾಜ್ ಹಾಗೂ ಡಾ.ಮಂಜುನಾಥ ರೆಡ್ಡಿ ಅವರುಗಳು ಮಾತನಾಡಿ, ಕಾಫಿ ಬೆಳೆಸುವ ಆಧುನಿಕ ಕ್ರಮ ಮತ್ತು ಗಿಡಗಳಿಗೆ ತಗಲುವ ರೋಗ ಮತ್ತು ಕೀಟ ಬಾಧೆಗಳನ್ನು ಹತ್ತಿಕ್ಕುವ ಕ್ರಮಗಳ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಮರಗೋಡು ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಕಾಂಗೀರ ಸತೀಶ್, ಮರಗೋಡು ಫಾರ್ಮರ್ಸ್ ಡೆವಲಪ್ ಮೆಂಟ್ ಮತ್ತು ರಿಕ್ರಿಯೇಶನ್ ಕ್ಲಬ್ ಅಧ್ಯಕ್ಷ ಕಟ್ಟೆಮನೆ ಪೂಣಚ್ಚ, ಪ್ರಮುಖರಾದ ಪುಲಿಯಂಡ ನಂಜಪ್ಪ, ಕಟ್ಟೆಮನೆ ಪ್ರೇಮ, ಕೊಡಗು ಗೌಡ ನಿವೃತ್ತ ನೌಕರರ ಸಂಘದ ಉಪಾಧ್ಯಕ್ಷ ಕುದುಪಜೆ ಬೋಜಪ್ಪ, ಸಹ ಕಾರ್ಯದರ್ಶಿ ಅತ್ತೇಡಿ ಕೃಷ್ಣಪ್ಪ, ನಿರ್ದೇಶಕರುಗಳಾದ ಬೈತಡ್ಕ ಬೆಳ್ಯಪ್ಪ, ದಂಬೆಕೋಡಿ ಆನಂದ, ಹೊಸೊಕ್ಲು ಟಿ.ಪೊನ್ನಪ್ಪ, ಹೊದ್ದೆಟ್ಟಿರ ರಾಮಯ್ಯ, ಕುಲ್ಲಚೆಟ್ಟಿ ಎಂ.ಪೂವಯ್ಯ, ಸೂದನ ಮೋಹಿನಿ ಮತ್ತಿತರರು ಉಪಸ್ಥಿತರಿದ್ದರು.
ಕೊಡಗು ಗೌಡ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿ ಮಾತನಾಡಿದರು. ಸಂಘದ ಖಜಾಂಚಿ ಕರ್ಣಯ್ಯನ ನಾಗೇಶ್ ನಿರೂಪಿಸಿ, ಕಾರ್ಯದರ್ಶಿ ಬಾರಿಕೆ ಅಯ್ಯಪ್ಪ ವಂದಿಸಿದರು. ವಿಚಾರ ಸಂಕಿರಣದಲ್ಲಿ ಪಾಲ್ಗೊಂಡಿದ್ದ ಹೆಚ್ಚಿನ ಸಂಖ್ಯೆಯ ಬೆಳೆಗಾರರು ಕೃಷಿಗೆ ಪೂರಕವಾಗಿ ಕೇಳಿದ ಪ್ರಶ್ನೆಗಳಿಗೆ ವಿಷಯ ತಜ್ಞರು ಸೂಕ್ತ ಉತ್ತರವನ್ನು ನೀಡಿದರು.
Breaking News
- *ಕೊಡಗು ಪತ್ರಿಕಾ ಭವನ ಟ್ರಸ್ಟ್ ನಿಂದ ಗಣರಾಜ್ಯೋತ್ಸವ ಆಚರಣೆ*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸ್ವಾತಂತ್ರ್ಯ ಮತ್ತು ಸಂವಿಧಾನಕ್ಕಾಗಿ ಶ್ರಮಿಸಿದ ಮಹನೀಯರನ್ನು ಗೌರವಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಗಣತಂತ್ರ ಹಬ್ಬದ ಮೂಲಕ ನಮ್ಮ ದೇಶದ ಸಾಂವಿಧಾನಿಕ ಅನನ್ಯತೆಯನ್ನು ಸಾರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನದ ಆಶಯಗಳಿಗೆ ಬದ್ಧರಾಗಿರೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸೋಣ, ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*
- *ನಾವೆಲ್ಲರೂ ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯೋಣ, ಸರ್ವರಿಗೂ ಗಣರಾಜ್ಯೋತ್ಸವದ ಶುಭಾಶಯಗಳು*
- *ಸಂವಿಧಾನವನ್ನು ನಾವು ರಕ್ಷಿಸಿದರೆ, ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ, ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು*