ಮಡಿಕೇರಿ ಅ.9 : 400 ಮೀ. ಓಟದ ಸ್ಪರ್ಧೆಯಲ್ಲಿ ಚೆಟ್ಟಳ್ಳಿ ಪ್ರೌಢಶಾಲಾ ವಿದ್ಯಾರ್ಥಿನಿ ಕೆ.ಹೆಚ್.ಅಂಜಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಮಡಿಕೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದ 400 ಮೀ. ಓಟದ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆಯುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಇವಳಿಗೆ ಶಾಲಾ ದೈಹಿಕ ಶಿಕ್ಷಕಿ ಗೀತಾ ಅಯ್ಯಪ್ಪ ತರಬೇತಿ ನೀಡುತ್ತಿದ್ದಾರೆ. ಶಾಲಾ ಸಂಚಾಲಕ ಮುಳ್ಳಂಡ ರತ್ತು ಚಂಗಪ್ಪ ಹಾಗೂ ಶಾಲಾ ಮುಖ್ಯೋಪದ್ಯಾಯರಾದ ಕೆ.ತಿಲಕ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಶುಭ ಹಾರೈಸಿದರು.









