Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡಿಗೆಯಲ್ಲಿ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಗೆ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡಿಗೆಯಲ್ಲಿ ರಾಜ್ಯಮಟ್ಟದ ಹಾಕಿ ಪಂದ್ಯಾವಳಿಗೆ ಚಾಲನೆ*

ಅಕ್ಟೋಬರ್ 9, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕೂಡಿಗೆ ಅ.9 : ಉತ್ತರ ಕೊಡಗಿನ ಕೂಡಿಗೆಯ ಸರ್ಕಾರಿ ಕ್ರೀಡಾಶಾಲೆಯ ಹಾಕಿ ಟರ್ಫ್ ಮೈದಾನದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕರು ಮತ್ತು ಬಾಲಕಿಯರ ಎರಡು ದಿನಗಳ ರಾಜ್ಯಮಟ್ಟದ ಮಕ್ಕಳ ಹಾಕಿ ಪಂದ್ಯಾವಳಿ ಆರಂಭಗೊಂಡಿತು.
ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ( ಡಯಟ್ ) ಯ ಉಪ ನಿರ್ದೇಶಕ ಹಾಗೂ ಸಂಸ್ಥೆಯ ಪ್ರಾಂಶುಪಾಲ ಎಂ.ಚಂದ್ರಕಾಂತ್ ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕ್ರೀಡೆಯು ನಮ್ಮ ದೈಹಿಕ ದೃಢತೆ ಮತ್ತು ಮಾನಸಿಕ ಆರೋಗ್ಯ ಸ್ವಾಸ್ಥ್ಯ ಕಾಪಾಡುವುದರೊಂದಿಗೆ ಶಿಸ್ತಿನ ಜೀವನ ಮತ್ತು ಉತ್ತಮ ಬದುಕನ್ನು ರೂಪಿಸಲು ಸಹಕಾರಿಯಾಗಿವೆ ಎಂದರು.
ಕೊಡಗಿನಲ್ಲಿ ಹಾಕಿ ಕ್ರೀಡೆಗೆ ನೀಡುತ್ತಿರುವ ಪ್ರೋತ್ಸಾಹದಿಂದ ಜಿಲ್ಲೆಯ ಕ್ರೀಡಾಪಟುಗಳು ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಹಾಕಿ ಟೂರ್ನಿಯಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ. ಪ್ರತಿಯೊಬ್ಬರೂ ಇಂತಹ ಕ್ರೀಡಾಕೂಟಗಳಿಗೆ ಹೆಚ್ಚಿನ ಸಹಕಾರ ನೀಡುವ ಮೂಲಕ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಬೇಕು ಎಂದರು.
ಏಷ್ಯನ್ ಕ್ರೀಡಾಕೂಟದಲ್ಲಿ ಚೀನಾ ಮತ್ತು ಜಪಾನ್ ಮಾದರಿಯಲ್ಲಿ ಭಾರತದ ಕ್ರೀಡಾಳುಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾಪಟುಗಳು ಅಂತರಾಷ್ಟ್ರೀಯ ಕ್ರೀಡೆಯಲ್ಲಿ ಮತ್ತಷ್ಟು ಉತ್ತಮ ಸಾಧನೆ ಮಾಡಲು ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಚಂದ್ರಕಾಂತ್ ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷ ಡಿ.ಭಾಸ್ಕರ್ ನಾಯಕ್, ಸೈನಿಕರು ಮತ್ತು ಕ್ರೀಡೆಯ ತವರು ಜಿಲ್ಲೆಯಾದ ಕೊಡಗಿನಲ್ಲಿ ಹಾಕಿ ಪಂದ್ಯಾವಳಿಗೆ ಹೆಚ್ಚಿನ ಪ್ರೋತ್ಸಾಹ ದೊರಕುತ್ತಿದೆ. ಜಿಲ್ಲೆಯಲ್ಲಿ ಕೊಡವ ಹಾಕಿ ಉತ್ಸವ ಸೇರಿದಂತೆ ವಿವಿಧೆಡೆ ಹಾಕಿ ಪಂದ್ಯಾವಳಿ ನಿರಂತರವಾಗಿ ನಡೆಯುತ್ತಿರುವುದು ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಲಾಗುತ್ತಿದೆ. ಜಿಲ್ಲೆಯಲ್ಲಿ ಕ್ರೀಡಾಳುಗಳು ಮತ್ತು ಕ್ರೀಡಾಕೂಟಗಳಿಗೆ ಎಲ್ಲರೂ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದರು.
ಪಥ ಸಂಚಲನದಲ್ಲಿ ಗೌರವ ವಂದನೆ ಸ್ವೀಕರಿಸಿದ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ(ಆಡಳಿತ) ಸೌಮ್ಯ ಪೊನ್ನಪ್ಪ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ( ಪ್ರಭಾರಿ) ಡಾ.ಸದಾಶಿವಯ್ಯ ಎಸ್.ಪಲ್ಲೇದ್ ಮಾತನಾಡಿ, ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಡಿಸೆಂಬರ್ ವೇಳೆಗೆ ನಡೆಯಲಿರುವ ರಾಷ್ಟ್ರೀಯ ಬಾಲಕಿಯರ ಹಾಕಿ ಟೂರ್ನಿಗೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಮಾತನಾಡಿ, ಹಾಕಿಯ ತವರಾದ ಕೊಡಗಿನಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕ್ರೀಡಾಭಿಮಾನಿಗಳು ಭಾಗವಹಿಸಿ ಮಕ್ಕಳ ಕ್ರೀಡೆಗೆ ಪ್ರೋತ್ಸಾಹಿಸಬೇಕು ಎಂದರು.
ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ವಿ.ಮಂಜೇಶ್, ವಿದ್ಯಾರ್ಥಿಗಳಿಂದ ಕ್ರೀಡಾಜ್ಯೋತಿ ಸ್ವೀಕರಿಸಿದರು.
ಡಿಡಿಪಿಐ ಕಛೇರಿಯ ಶಿಕ್ಷಣಾಧಿಕಾರಿ ಮಹದೇವಸ್ವಾಮಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಕೆ.ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜುನಾಥ್, ತಾಲ್ಲೂಕು ಘಟಕದ ಅಧ್ಯಕ್ಷ ಟಿ.ಕೆ.ಬಸವರಾಜ್, ಜಿಲ್ಲಾ ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎ. ಪ್ರವೀಣ್, ಜಿಲ್ಲಾ ವೃತ್ತಿ ಶಿಕ್ಷಕರ ಸಂಘದ ಅಧ್ಯಕ್ಷ ಎ.ಪಿ. ಸೋಮಯ್ಯ, ಕೂಡಿಗೆ ಸರ್ಕಾರಿ ಕ್ರೀಡಾಶಾಲೆಯ ಮುಖ್ಯ ಶಿಕ್ಷಕ ಬಿ.ಟಿ.ದೇವಕುಮಾರ್, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಬಿ.ಆರ್. ಗಾಯಿತ್ರಿ, ಎಂ.ಎಲ್.ಸುಕುಮಾರಿ, ವಿವಿಧ ದೈಹಿಕ ಶಿಕ್ಷಣ ಶಿಕ್ಷಕರ ಪ್ರಮುಖರಾದ ಎ.ಎ.ಲಕ್ಷ್ಮಣ್, ಬಿ.ಟಿ.ಪೂರ್ಣೇಶ್, ಎಚ್.ಪಿ.ಕರುಂಬಯ್ಯ, ಬಿ.ಕೆ.ಶಿವಶಂಕರ್, ಎಂ.ಎಸ್.ತಮ್ಮಯ್ಯ, ಬಿ.ಆರ್ ಪಿ.ಎಸ್.ಎನ್.ಲೋಕೇಶ್, ದೈಹಿಕ ಶಿಕ್ಷಣ ಶಿಕ್ಷಕರು ಪಾಲ್ಗೊಂಡಿದ್ದರು.
ಶಿಕ್ಷಕ ಉ.ರಾ.ನಾಗೇಶ್ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಡಾ ಸದಾಶಿವಯ್ಯ ಎಸ್.ಪಲ್ಲೇದ್ ಸ್ವಾಗತಿಸಿದರು. ತಾಲ್ಲೂಕು ಶಿಕ್ಷಣ ಪರಿವೀಕ್ಷಕಿ ಎಂ.ಎಲ್. ಸುಕುಮಾರಿ ವಂದಿಸಿದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಡಿಜೆ, ಧ್ವನಿವರ್ಧಕ ಬಳಕೆಗೆ ನಿರ್ಬಂಧ : 5 ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 1 ಲಕ್ಷ ರೂ.ವರೆಗೆ ದಂಡ : ಕೊಡಗು ಜಿಲ್ಲಾ ಪೊಲೀಸ್‌ ಎಚ್ಚರಿಕೆ*

ಸೆಪ್ಟೆಂಬರ್ 2, 2026

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು ಸೆ.1 NEWS DESK : ಮೂರ್ನಾಡು ಸಹಕಾರ ಸ್ಪೋರ್ಟ್ಸ್ ಕ್ಲಬ್ ವತಿಯಿಂದ 102ನೇ ವಾರ್ಷಿಕ  ಕೈಲ್ ಪೊಳ್ದ್  ಹಬ್ಬದ…

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.