ಮಡಿಕೇರಿ ಅ.10 : ಕುಶಾಲನಗರ 220/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್2 ಕಾವೇರಿ ಇಂಡಸ್ಟ್ರೀಯಲ್ ಏರಿಯಾ ಫೀಢರ್‍ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ಅ.11 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಕೂಡ್ಲೂರು, ಕೂಡುಮಂಗಳೂರು, ಕೂಡಿಗೆ, ಸುಂದರನಗರ, ಚಿಕ್ಕತ್ತೂರು, ದೊಡ್ಡತ್ತೂರು, ಹಳೆಕೂಡಿಗೆ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ವಿದ್ಯುತ್ ವ್ಯತ್ಯಯ : ನಗರದ 66/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್5 ಜಿ.ಟಿ.ರಸ್ತೆ ಹಾಗೂ ಎಫ್1 ಕೋಟೆ ದಸರಾ ಹಬ್ಬದ ಪ್ರಯುಕ್ತ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ಅಕ್ಟೋಬರ್, 11 ರಂದು ಬೆಳಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಪುಟಾಣಿನಗರ, ದೇಚೂರು, ಚೈನ್‍ಗೇಟ್, ಸುದರ್ಶನ ಸರ್ಕಲ್, ಜಿ.ಟಿ.ರಸ್ತೆ, ಅಶೋಕಪುರ, ಪೆಸನ್ಸ್‍ಲೇನ್, ಕೆ.ಎಸ್.ಆರ್.ಟಿ.ಸಿ. ಇಂಡಸ್ಟ್ರಿಯಲ್ ಏರಿಯಾ, ಕಾಲೇಜುರಸ್ತೆ, ಪ್ರಕೃತಿ ಬಡಾವಣೆ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.









