ಮಡಿಕೇರಿ ಅ.10 : “ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ’ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ದೇವರ ಸನ್ನಿಧಿಗಳಲ್ಲಿ ಊಧ್ವಾರ್ಚನೆ (ಶುಚಿತ್ವ) ಕಾರ್ಯವು ಅ.12 ರಂದು ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಲಿದೆ.
ಈ ಸಮಯದಲ್ಲಿ ಸಾರ್ವಜನಿಕ ಭಕ್ತಾದಿಗಳಿಗೆ ದೇವಾಲಯದ ಪ್ರವೇಶ ಹಾಗೂ ಯಾವುದೇ ಸೇವೆಗಳು ಇರುವುದಿಲ್ಲ. ಆದ್ದರಿಂದ ಎಂದಿನಂತೆ ಸಾರ್ವಜನಿಕ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಯವರ ಪರವಾಗಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಾರ್ವಜನಿಕ ಭಕ್ತಾದಿಗಳಲ್ಲಿ ಮನವಿ ಮಾಡಿದ್ದಾರೆ.









