ಮಡಿಕೇರಿ ಅ.10 : ಅಡುಗೆ ಅನಿಲ ಸೋರಿಕೆಯಿಂದ ಉಂಟಾದ ಬೆಂಕಿ ಅವಘಡದಲ್ಲಿ ಮೃತಪಟ್ಟ ಜೀವನದಾರಿ ಆಶ್ರಮದ ಸ್ಥಾಪಕ ರಮೇಶ್ ಅವರ ಪತ್ನಿ ರೂಪಾ (38) ಇಂದು ನಿಧನರಾಗಿದ್ದಾರೆ.
ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ನಾಲ್ಕು ದಿನಗಳ ಕಾಲ ಚಿಂತಾಜನಕ ಸ್ಥಿತಿಯಲ್ಲಿದ್ದ ರೂಪಾ ಚಿಕಿತ್ಸೆ ಫಲಕಾರಿ ಆಗದೆ ಸೋಮವಾರ ನಡು ರಾತ್ರಿ ಕೊನೆಯುಸಿರು ಎಳೆದಿದ್ದಾರೆ.
ಮೃತರು ಮೂವರು ಪುತ್ರಿಯರನ್ನು ಅಗಲಿದ್ದು, ಇಂದು ಮಡಿಕೇರಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ.








