ನಾಪೋಕ್ಲು ಅ.10 : ಜಿಲ್ಲಾ ಮಟ್ಟದ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ನಾಪೋಕ್ಲುವಿನ ಸೇಕ್ರೆಟ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಎಂ.ಬಿ ರಿಯಾಶರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾಡಳಿತ ,ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟದ ಅಥ್ಲೆಟಿಕ್ಸ್ ವಿಭಾಗದ ಭಾರದ ಗುಂಡು ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಬದ0ಜೆಟ್ಟಿರ ಗಪ್ಪಣ್ಣ ಹಾಗೂ ಶಿಕ್ಷಕ ವೃಂದ ಮಾರ್ಗದರ್ಶನ ನೀಡಿ ಪ್ರೋತ್ಸಾಹಿಸಿದ್ದರು.
ವರದಿ : ದುಗ್ಗಳ ಸದಾನಂದ








