ಮಡಿಕೇರಿ ಅ.10 : ಮೈಸೂರು ಕಾಂಗ್ರೆಸ್ ಸಮಿತಿಯ ಜಿಲ್ಲಾಧ್ಯಕ್ಷ ಡಾ. ಬಿ.ಜೆ.ವಿಜಯ ಕುಮಾರ್ ಮಡಿಕೇರಿ ಮತಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರನ್ನು ಕುಶಾಲನಗರದಲ್ಲಿ ಭೇಟಿ ಮಾಡಿ, ಪಕ್ಷ ಸಂಘಟನೆ, ಕ್ಷೇತ್ರದ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭ ಮೈಸೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಶಾಸಕರನ್ನು ಅಭಿನಂದಿಸಿ, ಸನ್ಮಾನಿಸಿ ಶುಭ ಆರೈಸಿದರು.
ಮೈಸೂರು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಶಿವಪ್ರಸಾದ್, ಪ್ರಮುಖರಾದ ಪದ್ಮನಾಭ ದಾಸನೂರು, ಸಂತೋಷ್ ಮೊಳೆಯೂರು ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ನ ಪ್ರಮುಖರು ಹಾಜರಿದ್ದರು.








