ಮಡಿಕೇರಿ ಅ.11 : ಮುಂಗಾರು ಸಂದರ್ಭದಲ್ಲಿ ಉಂಟಾಗಬಹುದಾಗಿದ್ದ ಪ್ರಾಕೃತಿಕ ವಿಕೋಪ ಎದುರಿಸಲು ಆಗಮಿಸಿದ್ದ ಎನ್ಡಿಆರ್ಎಫ್ ತಂಡಕ್ಕೆ ಜಿಲ್ಲಾಡಳಿತ ವತಿಯಿಂದ ಬೀಳ್ಕೊಡಲಾಯಿತು.
ನಗರದ ಖಾಸಗಿ ಹೋಟೆಲ್ನಲ್ಲಿ 10 ನೇ ಬೆಟಾಲಿಯನ್ನ ಎನ್ಡಿಆರ್ಎಫ್ ತಂಡದ ಮುಖ್ಯಸ್ಥರಾದ ಶಾಂತಿಲಾಲ್ ಜಾಟಿಯಾ ಅವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಶಾಲೂ, ಫಲ ತಾಂಬೂಲ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು.
ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ ರಾಜಾ ಮಾತನಾಡಿ ಕೊಡಗು ಜಿಲ್ಲೆಯಲ್ಲಿ 2018, 2019, 2020 ರಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಹಿನ್ನೆಲೆ, ಈ ಬಾರಿಯೂ ಸಹ ಎನ್ಡಿಆರ್ಎಫ್ ತಂಡ ಜಿಲ್ಲೆಗೆ ಆಗಮಿಸಿ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿತ್ತು ಎಂದು ಹೇಳಿದರು.
ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿ ಬರುವ ಕೊಡಗು ವಿಶೇಷ ಜಿಲ್ಲೆಯಾಗಿದೆ. ಬರೆಕುಸಿತ, ಪ್ರವಾಹ ಉಂಟಾದ ಸಂದರ್ಭದಲ್ಲಿ ಹೇಗೆ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಅಣಕು ಪ್ರದರ್ಶನವನ್ನು ಏರ್ಪಡಿಸಿ ಜಿಲ್ಲೆಯ ಜನತೆಯಲ್ಲಿ ಧೈರ್ಯ ತುಂಬುವ ಕೆಲಸ ಮಾಡಿತ್ತು ಎಂದು ಹೇಳಿದರು.
ಶಾಂತಿಲಾಲ್ ಜಾಟಿಯಾ ಅವರ ನೇತೃತ್ವದ ಎನ್ಡಿಆರ್ಎಫ್ ತಂಡ ಹಲವು ಕಾರ್ಯ ಚಟುವಟಿಕೆಗಳನ್ನು ಕೈಗೊಂಡು ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಮಾತನಾಡಿ ಅತೀವೃಷ್ಟಿ, ಅನಾವೃಷ್ಟಿ ಎದುರಿಸುವಲ್ಲಿ ಪ್ರತೀ ಹಂತದಲ್ಲಿಯೂ ಸಿದ್ಧತೆ ಅತ್ಯಗತ್ಯ. ಆ ನಿಟ್ಟಿನಲ್ಲಿ ಎನ್ಡಿಆರ್ಎಫ್ ತಂಡ ತಮ್ಮದೇ ಕಾರ್ಯ ಚಟುವಟಿಕೆಯನ್ನು ಕೈಗೊಂಡು ಜಿಲ್ಲೆಯ ಜನತೆಯಲ್ಲಿ ವಿಶ್ವಾಸ ಉಂಟುಮಾಡಿದೆ ಎಂದು ಹೇಳಿದರು.
ಎನ್ಡಿಆರ್ಎಫ್ ತಂಡದ 10 ನೇ ಬ್ಯಾಟಾಲಿಯನ್ ಮುಖ್ಯಸ್ಥರಾದ ಶಾಂತಿಲಾಲ್ ಜಾಟಿಯಾ ಅವರು ಮಾತನಾಡಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಜೊತೆಗೆ ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ಪ್ರಾಕೃತಿಕ ವಿಕೋಪ ಎದುರಿಸುವ ನಿಟ್ಟಿನಲ್ಲಿ ಅಣಕು ಪ್ರದರ್ಶನ, ವಿವಿಧ ಗ್ರಾ.ಪಂ.ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮಗಳು, 20 ಶಾಲೆಗಳಲ್ಲಿ ಶಾಲಾ ಮಕ್ಕಳಿಗೆ ಅರಿವು ಕಾರ್ಯಕ್ರಮ, ಮೆಡಿಕಲ್ ಕಿಟ್ ವಿತರಣೆ, ವಿವಿಧ ಕಡೆಗಳಲ್ಲಿ ಗಿಡ ನೆಡುವ ಕಾರ್ಯಕ್ರಮ, ಗಾಂಧಿ ಜಯಂತಿ ಪ್ರಯುಕ್ತ ನಗರಸಭೆಯೊಂದಿಗೆ ಶ್ರಮದಾನ ಕಾರ್ಯಕ್ರಮ, ಹೀಗೆ ಹಲವು ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗಿತ್ತು ಎಂದು ವಿವರಿಸಿದರು.
ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್ ಮಾತನಾಡಿ ಎನ್ಡಿಆರ್ಎಫ್ ತಂಡದ ಕಾರ್ಯ ಚಟುವಟಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಎನ್ಡಿಆರ್ಎಫ್ ತಂಡದ ಜಿ.ಎಲ್.ಆಕರ್ಷ್ ಮಾತನಾಡಿ ಯಾವುದೇ ರೀತಿಯ ವಿಕೋಪಗಳು ಸಂಭವಿಸಿದ್ದಲ್ಲಿ ಎದುರಿಸುವುದು ಅತ್ಯಗತ್ಯವಾಗಿದೆ ಎಂದರು.
ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ್, ಡಿವೈಎಸ್ಪಿ ಜಗದೀಶ್, ಅನೂಪ್ ಮಾದಪ್ಪ, ಶಿರಸ್ತೇದಾರ್ ಪ್ರಕಾಶ್, ಎನ್ಡಿಆರ್ಎಫ್ ತಂಡದ ಪ್ರತಿನಿಧಿಗಳು ಇತರರು ಇದ್ದರು.
Breaking News
- *ಹಿಂದು ಯುವ ಸಮೂಹದ ಜಾಗೃತಿಗಾಗಿ ಮಡಿಕೇರಿಯಲ್ಲಿ ಜಾಗೃತಿ ಬೈಕ್ ಜಾಥಾ*
- *ಪೆರಾಜೆ ಶ್ರೀ ಶಾಸ್ತಾವು ದೇವಾಲಯದ ಪ್ರತಿಷ್ಠಾ ವಾರ್ಷಿಕೋತ್ಸವ : ನೂತನ ರಾಜಗೋಪುರ ಉದ್ಘಾಟನೆ*
- *ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಮುಂಖಡರ ಸಭೆ*
- *ಸುಂಟಿಕೊಪ್ಪ : ಆರೋಗ್ಯ ಸಮಸ್ಯೆಗೆ ಫುಟ್ ಪಲ್ಸ್ ಥೆರಪಿ ರಾಮಬಾಣ : ರತ್ನಾಕರ ಶೆಟ್ಟಿ*
- *ಮಾದಾಪುರ ಶ್ರೀಮತಿ ಡಿ.ಚೆನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಬೆಂಚ್-ಡೆಸ್ಕ್ ಕೊಡುಗೆ*
- *ಭಾಗಮಂಡಲ ಫ್ಲೈ ಓವರ್ – ಫ್ಲಾಶ್ ಬ್ಯಾಕ್*
- *ಅರ್ಚಕರ ಮೇಲೆ ನಡೆದ ಹಲ್ಲೆ ಪ್ರಕರಣ : ಸಹಕರಿಸಿದ ಆರೋಪಿಗಳು ಹಾಗೂ ವಾಹನಗಳು ವಶ : ಆರೋಪಿಗಳಿಗೆ ಸಹಾಯ ಮಾಡುತ್ತಿರುವವರ ಕುರಿತು ಮಾಹಿತಿ ಒದಗಿಸಲು ಎಸ್ಪಿ ಮನವಿ*
- *ಮುಖ್ಯಮಂತ್ರಿಗಳಿಗೆ ಕೊಡಗು ಎಸ್ಡಿಪಿಐಯಿಂದ ಪಂಚ ಪ್ರಶ್ನೆ*
- *ಜೀವ ಬೆದರಿಕೆ ಇದೆ ಎಂದು ಆರೋಪಿಸಿ ದೂರು ನೀಡಿದ ಎನ್.ಯು.ನಾಚಪ್ಪ*
- *ಮಡಿಕೇರಿಯಲ್ಲಿ ಹುತಾತ್ಮ ದಿನಾಚರಣೆ : ಗಾಂಧೀಜಿ ತತ್ವ, ಆದರ್ಶ ಮೈಗೂಡಿಸಿಕೊಳ್ಳಿ : ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ*