Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*
  • *ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*
  • *ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*
  • *ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*
  • *ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*
  • *ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*
  • *ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  
  • *ಕೊಡಗು ಜಿಲ್ಲೆಯನ್ನು ಕಡೆಗಣಿಸಿದ ಬಜೆಟ್ : ತೇಲಪಂಡ ಶಿವಕುಮಾರ್ ಟೀಕೆ*
  • *ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*
  • *ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ‘ಕಾರ್ಮಿಕರ ಅಪಘಾತ ಪರಿಹಾರ ಯೋಜನೆ’ಯಡಿ ಸೌಲಭ್ಯ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ‘ಕಾರ್ಮಿಕರ ಅಪಘಾತ ಪರಿಹಾರ ಯೋಜನೆ’ಯಡಿ ಸೌಲಭ್ಯ*

ಅಕ್ಟೋಬರ್ 12, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
bus driver holding steering hand closeup shot
Facebook Twitter WhatsApp Email Telegram Copy Link

ಮಡಿಕೇರಿ ಅ.12 : ಕಾರ್ಮಿಕ ಇಲಾಖೆ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿಯಲ್ಲಿ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‍ಗಳು ನಿರಂತರವಾಗಿ ಅಪಘಾತಗಳಿಗೆ ತುತ್ತಾಗಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಅಪಘಾತಕ್ಕೀಡಾದಾಗ ಮರಣಕ್ಕೆ ತುತ್ತಾಗುವ, ಶಾಶ್ವತ ದುರ್ಬಲತೆ ಅಥವಾ ತಾತ್ಕಲಿಕ ದುರ್ಬಲತೆ ಹೊಂದಿದ ಸಂದರ್ಭದಲ್ಲಿ, ಅವರ ದುಡಿಮೆಯನ್ನೇ ಅವಲಂಬಿಸಿರುವ ಅವರ ಕುಟುಂಬವು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಂಕಷ್ಟಕ್ಕೆ ಸಿಲುಕುತ್ತದೆ. ಇಂತಹ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಅಪಘಾತ ಪರಿಹಾರ ಸೌಲಭ್ಯ ಒದಗಿಸುವ ಮೂಲಕ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸುವ ಸದುದ್ದೇಶದಿಂದ ರಾಜ್ಯ ಸರ್ಕಾರವು ‘ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ’’ ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು 2012 ರಲ್ಲಿ ಜಾರಿಗೆ ತಂದಿದೆ.
ಈ ಯೋಜನೆಯಡಿ ದೊರಕುವ ಸೌಲಭ್ಯಗಳು ಇಂತಿವೆ. ಅಪಘಾತ ಪರಿಹಾರ ಯೋಜನೆಯ ವಿಶೇಷತೆಗಳು. ಈ ಯೋಜನೆಯು ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತದೆ. ಯೋಜನೆಯು ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‍ಗಳಿಗೆ ಅನ್ವಯಿಸುತ್ತದೆ. ವಯೋಮಿತಿ 20 ರಿಂದ 70 ವರ್ಷಗಳು. ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲೂ ಸಹ ಲಭ್ಯವಾಗುತ್ತದೆ.
ಯೋಜನೆಯ ಷರತ್ತುಗಳು: ಚಾಲಕರು, ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಿಂದ ವಾಣಿಜ್ಯ ವಾಹನ ಚಲಾಯಿಸಲು ಊರ್ಜಿತ ಚಾಲನಾ ಪರವಾನಗಿಯನ್ನು ಹೊಂದಿರುವುದು ಕಡ್ಡಾಯ. ಚಾಲಕರು ಮಂಡಳಿಯಲ್ಲಿ ಯೋಜನೆಯಡಿ ಪ್ರತ್ಯೇಕವಾಗಿ ನೋಂದಣಿ ಮಾಡಿಸುವ ಅವಶ್ಯಕತೆ ಇರುವುದಿಲ್ಲ. ನಿರ್ವಾಹಕರು ಹಾಗೂ ಕ್ಲೀನರ್‍ಗಳು ಮಂಡಳಿಯ ನಿಯಮಾನುಸಾರ ಅಧಿಸೂಚಿಸಲ್ಪಟ್ಟ ಆಯಾಯ ಜಿಲ್ಲೆಯ ನೋಂದಣಿ ಅಧಿಕಾರಿಗಳಿಂದ ಯೋಜನೆಯಡಿ ಫಲಾನುಭವಿಯಾಗಿ ನೋಂದಣಿ ಮಾಡಿಸಿಕೊಳ್ಳಬೇಕು.
ಯೋಜನೆಯ ಸೌಲಭ್ಯಗಳು: ಅಪಘಾತದಿಂದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‍ಗಳು ಮರಣ ಹೊಂದಿದಲ್ಲಿ, ಅವರ ನಾಮ ನಿರ್ದೇಶಿತರಿಗೆ ರೂ.5 ಲಕ್ಷ ಪರಿಹಾರ. ಅಪಘಾತದಿಂದ ಶಾಶ್ವತ ದುರ್ಬಲತೆ ಹೊಂದಿದಾಗ, ಫಲಾನುಭವಿಗಳಿಗೆ ದುರ್ಬಲತೆಯ ಪ್ರಮಾಣಕ್ಕನುಗುಣವಾಗಿ ಗರಿಷ್ಠ ರೂ.2 ಲಕ್ಷದವರೆಗೆ ಪರಿಹಾರ. ಅಪಘಾತದಿಂದ ತಾತ್ಕಾಲಿಕ ದುರ್ಬಲತೆ ಹೊಂದಿದಾಗ, ಅಪಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ, ಗರಿಷ್ಟ ರೂ.50 ಸಾವಿರವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನು ಪಾವತಿಸಲಾಗುವುದು. 15 ದಿನಗಳಿಗಿಂತ ಹೆಚ್ಚು ದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದಲ್ಲಿ, ಗರಿಷ್ಠ ರೂ.1 ಲಕ್ಷದವರೆಗೆ ಅಥವಾ ನಿಖರ ಆಸ್ಪತ್ರೆ ವೆಚ್ಚ, ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನು ಪಾವತಿಸಲಾಗುವುದು.
ಪರಿಹಾರ ಮೊತ್ತವನ್ನು ಪಡೆಯಲು ಅಪಘಾತ ಸಂಭವಿಸಿದ ಒಂದು ವರ್ಷದೊಳಗೆ ಮಂಡಳಿಗೆ ಫಲಾನುಭವಿ/ ನಾಮ ನಿರ್ದೇಶಿತರು ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು. ಅಪಘಾತದಿಂದ ಮರಣ ಹೊಂದಿದ ಪ್ರಕರಣಗಳಲ್ಲಿ, ಫಲಾನುಭವಿಯ ನಾಮ ನಿರ್ದೇಶಿತರು ಕ್ಲೇಮ್ ಅರ್ಜಿಯ ಜೊತೆಗೆ ಮರಣ ಪ್ರಮಾಣ ಪತ್ರ, ಮರಣೋತ್ತರ ಪರೀಕ್ಷಾ ವರದಿ, ಪ್ರಥಮ ವರ್ತಮಾನ ವರದಿ ಮತ್ತು ಊರ್ಜಿತ ಚಾಲನಾ/ ನಿರ್ವಾಹಕ ಪರವಾನಗಿ ಹಾಗೂ ಕ್ಲೀನರ್‍ಗಳು ನೋಂದಣಿ ಗುರುತಿನ ಚೀಟಿ ಲಗತ್ತಿಸಿ ಸಲ್ಲಿಸಬೇಕು.
ಅಪಘಾತದಿಂದ ದುರ್ಬಲತೆ ಉಂಟಾದಲ್ಲಿ ಕ್ಲೇಮ್ ಅರ್ಜಿಯ ಜೊತೆಗೆ ಊರ್ಜಿತ ಚಾಲನಾ/ ನಿರ್ವಾಹಕ ಪರವಾನಗಿ/ ಬ್ಯಾಡ್ಜ್, ಕ್ಲೀನರ್‍ಗಳು ನೋಂದಣಿ ಗುರುತಿನ ಚೀಟಿ, ಪ್ರಥಮ ವರ್ತಮಾನ ವರದಿ ಮತ್ತು ಒಳರೋಗಿ ಆಸ್ಪತ್ರೆ ವೆಚ್ಚ ಹಿಂಪಡೆಯಲು ವೈದ್ಯಕೀಯ ಪ್ರಮಾಣ ಪತ್ರ/ಬಿಲ್‍ಗಳ ಮೂಲ ಪ್ರತಿಗಳನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಸ್ವೀಕರಿಸಿದ ಕ್ಲೇಮ್ ಅರ್ಜಿಯ ದಾಖಲೆಗಳನ್ನು ನಿಯಮಾನುಸಾರ ಪರಿಶೀಲಿಸಿ ಅರ್ಹರಿದ್ದಲ್ಲಿ, ಪರಿಹಾರದ ಮೊತ್ತವನ್ನು ಅರ್ಜಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು.
ಅಪಘಾತದಿಂದ ಮರಣ ಹೊಂದಿದ ಅಥವಾ ಸಂಪೂರ್ಣ ಶಾಶ್ವತ ದುರ್ಬಲತೆ ಹೊಂದಿದ ಫಲಾನುಭವಿಗಳ ಇಬ್ಬರು ಮಕ್ಕಳಿಗೆ, 1 ನೇ ತರಗತಿಯಿಂದ ಪದವಿ ಪೂರ್ವ/12 ನೇ ತರಗತಿಯ ವರೆಗೆ ವಾರ್ಷಿಕ ತಲಾ ರೂ. 10,000/-ಗಳ ಶೈಕ್ಷಣಿಕ ಧನ ಸಹಾಯ ನೀಡಲಾಗುವುದು.
ಶೈಕ್ಷಣಿಕ ಧನ ಸಹಾಯದ ಅರ್ಜಿಗಳನ್ನು ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಮುಖಾಂತರ ಅಥವಾ ನೇರವಾಗಿ ಮಂಡಳಿಗೆ ಸಲ್ಲಿಸಬಹುದು. ಈ ಅರ್ಜಿಯನ್ನು ಪರಿಶೀಲಿಸಿ, ಧನ ಸಹಾಯದ ಮೊತ್ತವನ್ನು ಅರ್ಜಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಕೊಠಡಿ ಸಂಖ್ಯೆ 11, ಜಿಲ್ಲಾಡಳಿತ ಭವನ, ಮಡಿಕೇರಿ, ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ ಮಡಿಕೇರಿ, ಸೋಮವಾರಪೇಟೆ ಹಾಗೂ ವಿರಾಜಪೇಟೆ ಇಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ  ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ : ಶಾಸಕ ಪೊನ್ನಣ್ಣರಿಗೆ ಸನ್ಮಾನ*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಐಟಿ ಹಬ್ ಆಗಲಿದೆಯೇ ಸಾಂಸ್ಕೃತಿಕ ನಗರಿ?: ಮೈಸೂರು ಇನ್ಮುಂದೆ ರಾಜ್ಯದ ಎರಡನೇ ಐಟಿ ಸಿಟಿ; ಮಂಗಳೂರಿಗೂ ಸಿಕ್ತು ಐಟಿ ಪಾರ್ಕ್ ಭಾಗ್ಯ!*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ

ಬೆಂಗಳೂರು, ಮಾರ್ಚ್ 7, 2026: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರು ಈಗ ಮಾಹಿತಿ ತಂತ್ರಜ್ಞಾನದ (IT) ಹೊಸ ಕೇಂದ್ರವಾಗಿ ಹೊರಹೊಮ್ಮಲು…

*ಬೆಂಗಳೂರು-ಕಲಬುರಗಿ ಸೇರಿ ಹಲವು ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ; ಮಾರ್ಚ್ 15ರಿಂದ ಹೊಸ ವೇಳಾಪಟ್ಟಿ ಜಾರಿ!*

ಮಾರ್ಚ್ 7, 2026

*ಕಾವೇರಿ ಶಾಲೆಯಲ್ಲಿ ಅಚ್ಚುಕಟ್ಟಾಗಿ ನೆರವೇರಿದ ಬೀಳ್ಕೊಡುಗೆ ಹಾಗೂ ಪದವಿ ಪ್ರಧಾನ ಕಾರ್ಯಕ್ರಮ*

ಮಾರ್ಚ್ 6, 2026

*ಮೊಣ್ಣಂಡ ಕೆ.ಚೆಂಗಪ್ಪ ಹಾಗೂ ಚೆರಿಯಮನೆ ಕೃಷ್ಣಪ್ಪ ದತ್ತಿ ಉಪನ್ಯಾಸ ಕಾರ್ಯಕ್ರಮ*

ಮಾರ್ಚ್ 6, 2026

*ಬಸವೇಶ್ವರ ಸನ್ನಿಧಿಯಲ್ಲಿ ಮಳೆ ಪೂಜೆ*

ಮಾರ್ಚ್ 6, 2026

*ಸವ೯ ಜನರ ಪಾಲಿನ ಕಲ್ಯಾಣದ ಬಜೆಟ್ : ಶಾಸಕ ಡಾ.ಮಂಥರ್ ಗೌಡ ಶ್ಲಾಘನೆ*  

ಮಾರ್ಚ್ 6, 2026

*ಕೊಡಗಿನ ಜನರ ನಿರೀಕ್ಷೆ ಹುಸಿಯಾಗಿದೆ*

ಮಾರ್ಚ್ 6, 2026

*ಸಾಲದ ಶೂಲಕ್ಕೆ ತಳ್ಳಿದ ಬಜೆಟ್ : ವಿರಾಜಪೇಟೆ ಕ್ಷೇತ್ರದ ನಿರೀಕ್ಷೆಗಳು ಹುಸಿಯಾಗಿದೆ : ಬಿಜೆಪಿ ಟೀಕೆ*

ಮಾರ್ಚ್ 6, 2026

*ಅಸ್ಸಾಂನಲ್ಲಿ ಸುಖೋಯ್-30 ಯುದ್ಧ ವಿಮಾನ ಪತನ: ಇಬ್ಬರು ಪೈಲಟ್‌ಗಳು ಹುತಾತ್ಮ*

ಮಾರ್ಚ್ 6, 2026

*ಹಾರ್ಮುಜ್ ಬಂದ್ ಆದ್ರೂ ತೈಲಕ್ಕೆ ಬರಲ್ಲ ಕಂಟಕ!: ಭಾರತದ ಇಂಧನ ಸುರಕ್ಷತೆ ಬಗ್ಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಅಪ್ಡೇಟ್*

ಮಾರ್ಚ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.