ಪುತ್ತೂರು ಅ.12 : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಅಂತಿಮ ವರ್ಷದ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿನಿ ಧನ್ಯ.ಪಿ ಕೆಡೆನ್ಸ್ ಡಿಸೈನ್ ಸಿಸ್ಟಮ್ಸ್ (Cadence Design Systems) ಸಂಸ್ಥೆಗೆ ಆಯ್ಕೆಯಾಗಿದ್ದಾರೆ.
2024ನೇ ಸಾಲಿನ ಅಂತಿಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯನ್ವಯ ಸೆಪ್ಟೆಂಬರ್ 30 ಹಾಗೂ ಅಕ್ಟೋಬರ್ 1 ರಂದು ನಡೆದ ನೇಮಕಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರೈಸಿ ಧನ್ಯ ಆಯ್ಕೆಯಾಗಿದ್ದಾರೆ. ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ಕ್ಷೇತ್ರದ ದಿಗ್ಗಜ ಕೆಡೆನ್ಸ್ ಡಿಸೈನ್ ಸಿಸ್ಟಮ್ಸ್ ಸಂಸ್ಥೆಯು ಕಾಲೇಜಿಗೆ ಭೇಟಿ ನೀಡಿತ್ತು. ಈ ನೇಮಕಾತಿ ಪ್ರಕ್ರಿಯೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ 14 ಇಂಜಿನಿಯರಿಂಗ್ ಕಾಲೇಜುಗಳ ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದ 470 ಅರ್ಹ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಒಟ್ಟು ಏಳು ಸುತ್ತಿನಲ್ಲಿ ಆಯ್ಕೆ ಪ್ರಕ್ರಿಯೆಯು ನಡೆದಿದ್ದು, ಅಂತಿಮವಾಗಿ ಇಬ್ಬರು ಆಯ್ಕೆಯಾಗಿದ್ದಾರೆ. ವಾರ್ಷಿಕ 15 ಲಕ್ಷ ರೂಪಾಯಿ ವೇತನ ನೀಡುವ ಹುದ್ದೆಗೆ ನಡೆದ ನೇಮಕಾತಿ ಇದಾಗಿದೆ. ಕಾಲೇಜಿನ ಎಲ್ಲಾ ವಿಭಾಗಗಳಿಗೂ ಅನ್ವಯವಾಗುವಂತೆ ಮುಂದಿನ ದಿನಗಳಲ್ಲಿ ಅನೇಕ ಹೆಸರಾಂತ ಕಂಪೆನಿಗಳು ಕ್ಯಾಂಪಸ್ ನೇಮಕಾತಿಗಾಗಿ ಕಾಲೇಜಿಗೆ ಭೇಟಿ ನೀಡಲಿವೆ ಎಂದು ವಿವೇಕಾನಂದ ಕಾಲೇಜ್ ನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.
Breaking News
- *ಪ್ರತೀ ಜಿಲ್ಲೆಯಲ್ಲೂ 200 ಆಸನಗಳ ಮಿನಿ ಚಿತ್ರಮಂದಿರ ಸ್ಥಾಪನೆ : ಸಿ.ಎಂ ಘೋಷಣೆ*
- *ಖೋ ಖೋ ವಿಶ್ವಕಪ್ : ರಾಜ್ಯದ ಇಬ್ಬರು ಆಟಗಾರರಿಗೆ ತಲಾ 5 ಲಕ್ಷ ರೂ. ಘೋಷಿಸಿದ ಸಿಎಂ*
- *ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನದ ಆಕರ್ಷಣೆ*
- *ರೈಲ್ವೆ ಇಲಾಖೆಯ 32,438 ಗ್ರೂಪ್-ಡಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ*
- *ಭಾಗಮಂಡಲ ಗ್ರಾ.ಪಂ ವತಿಯಿಂದ ಅಂಗನವಾಡಿಗಳಿಗೆ ಕೊಡುಗೆ*
- *ಗಣರಾಜ್ಯೋತ್ಸವದಂದು ಸಿಎನ್‌ಸಿಯಿಂದ ಶಾಂತಿಯುತ ಹಕ್ಕೊತ್ತಾಯ ಮಂಡನೆ*
- *ಪ್ರಾಣಿ ದಯಾಸಂಘದ ವಾರ್ಷಿಕ ಮಹಾಸಭೆ : ಹಲವು ವಿಚಾರ ಕುರಿತು ಚರ್ಚೆ*
- *ರಾಜಾಸೀಟು ಉದ್ಯಾನದಲ್ಲಿ ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ : ಶಾಸಕ ಡಾ.ಮಂತರ್ ಗೌಡ ಉದ್ಘಾಟನೆ*
- *ರಾಜಾಸೀಟು ಫಲಪುಷ್ಪ ಪ್ರದರ್ಶನದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ಓಂಕಾರೇಶ್ವರ ದೇವಾಲಯದ ಆಕರ್ಷಣೆ*
- *ಮಡಿಕೇರಿಯಲ್ಲಿ ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣಾ ಶಿಬಿರ*